ರಫೀಕ್ ಮದನಿ ಉರುಮಣೆ
ಮಂಗಳೂರು, ಜ.11: ಮಂಜನಾಡಿ ಸಮೀಪದ ನಾಟೆಕಲ್ ಬಳಿಯ ಉರುಮಣೆ ನಿವಾಸಿ ಮುಹಮ್ಮದ್ ರಫೀಕ್ ಮದನಿ ಉರುಮಣೆ (29) ಶುಕ್ರವಾರ ಮುಂಜಾನೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ನ್ಯುಮೋನಿಯಾದಿಂದ ಬಳಲುತ್ತಿದ್ದ ಇವರನ್ನು ವಾರದ ಹಿಂದೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮುಂಜಾನೆ ಸುಮಾರು 5:30ಕ್ಕೆ ಅವರು ಕೊನೆಯುಸಿರೆಳೆದಿದ್ದಾರೆ.
ನಗರದ ಬಂದರ್ ಅಲ್-ಅಝ್ಹರಿಯಾದಲ್ಲಿ ಮುಅಲ್ಲಿಮರಾಗಿ ಸೇವೆ ಸಲ್ಲಿಸುತ್ತಿದ್ದ ಮೃತರು ಪತ್ನಿ, ಓರ್ವ ಪುತ್ರಿ ಮತ್ತು ಅಪಾರ ಬಂದು ಬಳಗವನ್ನು ಅಗಲಿದ್ದಾರೆ.
Next Story