ವಿಜಯಪುರ: ಕಲ್ಲಿನಿಂದ ಜಜ್ಜಿ ಯುವಕನ ಹತ್ಯೆ
ವಿಜಯಪುರ, ಜ.11: ಯುವಕನೋರ್ವನನ್ನು ಮುಖಕ್ಕೆ ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ವಿಜಯಪುರ ಜಿಲ್ಲೆಯ ನಿಡಗುಂದಿ ಪಟ್ಟಣದಲ್ಲಿ ನಡೆದಿದೆ.
ಮೃತರನ್ನು ಮಹಾಂತೇಶ ಗೌಡ(32) ಎಂದು ಗುರುತಿಸಲಾಗಿದೆ. ಇವರ ಮೃತದೇಹವು ಪಟ್ಟಣದ ಸರಕಾರಿ ಆಸ್ಪತ್ರೆಯ ಸಮೀಪದ ಸ್ಮಶಾನದಲ್ಲಿ ಪತ್ತೆಯಾಗಿದೆ. ಮುಖಕ್ಕೆ ಕಲ್ಲಿನಿಂದ ಜಜ್ಜಿ ಕೊಲೆಗೈಯಲಾಗಿದೆ.
ಹಳೆ ದ್ವೇಷದ ಹಿನ್ನೆಲೆಯಲ್ಲಿ ಪರಿಚಯಸ್ಥರೇ ಕೊಲೆ ಮಾಡಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಸ್ಥಳಕ್ಕೆ ನಿಡಗುಂದಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
Next Story