varthabharthi

ಸಿನಿಮಾ

ಈ ಸಾಧನೆ ಮಾಡಿದ ಮೊದಲ ಕನ್ನಡ ಚಿತ್ರ

ಸ್ಯಾಂಡಲ್ ವುಡ್ ಇತಿಹಾಸದಲ್ಲಿ ಹೊಸ ದಾಖಲೆ ಬರೆದ ‘ಕೆಜಿಎಫ್’

ವಾರ್ತಾ ಭಾರತಿ : 13 Jan, 2019

ಬೆಂಗಳೂರು, ಜ.13: ಯಶ್ ನಟನೆಯ, ಪ್ರಶಾಂತ್ ನೀಲ್ ನಿರ್ದೇಶನದ ‘ಕೆಜಿಎಫ್’ ಚಿತ್ರ ಸ್ಯಾಂಡಲ್ ವುಡ್ ಇತಿಹಾಸದಲ್ಲಿ ಹೊಸ ದಾಖಲೆಯೊಂದನ್ನು ಬರೆದಿದೆ. 5 ಭಾಷೆಗಳಲ್ಲಿ ಬಿಡುಗಡೆಯಾಗಿದ್ದ ಈ ಚಿತ್ರಕ್ಕೆ ಎಲ್ಲೆಡೆಯಿಂದ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದ್ದು, ತಮಿಳುನಾಡು ಮತ್ತು ಆಂಧ್ರ ಪ್ರದೇಶದಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿದೆ. ಇದೀಗ ಈ ಚಿತ್ರ ಪಾಕಿಸ್ತಾನದಲ್ಲಿ ಬಿಡುಗಡೆಯಾಗಿದ್ದು, ಈ ಸಾಧನೆ ಮಾಡಿದ ಮೊತ್ತಮೊದಲ ಕನ್ನಡ ಚಿತ್ರ ಎನಿಸಿಕೊಂಡಿದೆ.

ಪಾಕಿಸ್ತಾನದಲ್ಲಿ ಶುಕ್ರವಾರ ಕೆ.ಜಿ.ಎಫ್. ಬಿಡುಗಡೆಯಾಗಿದ್ದು, ಉತ್ತಮ ಪ್ರದರ್ಶನ ಕಾಣುತ್ತಿದೆ ಎಂದು ವರದಿಯಾಗಿದೆ. ಹಿಂದಿ ಡಬ್ಬಿಂಗ್ ನಲ್ಲಿ ಲಾಹೋರ್ ಮತ್ತು ಇಸ್ಲಾಮಾಬಾದ್ ನಲ್ಲಿ ಚಿತ್ರ ಬಿಡುಗಡೆಯಾಗಿದ್ದು, ಮಲ್ಟಿಪ್ಲೆಕ್ಸ್ ನಲ್ಲಿ ಉತ್ತಮ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ ಎಂದು ಸಿನೆಮಾ ವಿಮರ್ಶಕರೊಬ್ಬರು ಮಾಹಿತಿ ನೀಡಿದ್ದಾರೆ ಎಂದು ವರದಿಯಾಗಿದೆ.

ಈ ಹಿಂದೆ ಪಾಕಿಸ್ತಾನದಲ್ಲಿ ಬಿಡುಗಡೆಯಾಗಿದ್ದ ದಕ್ಷಿಣ ಭಾರತದ ಚಿತ್ರವೆಂದರೆ ರಜಿನಿಕಾಂತ್ ಅಭಿನಯದ 2.0.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)