ಅಮಿತ್ ಶಾ ಆಸ್ಪತ್ರೆಯಿಂದ ಡಿಸ್ಚಾರ್ಜ್
ಹೊಸದಿಲ್ಲಿ, ಜ.20: ಅಸೌಖ್ಯದಿಂದ ಹೊಸದಿಲ್ಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರವಿವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಅಮಿತ್ ಶಾ ಅವರು ಜ್ವರದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಅಮಿತ್ ಶಾ ಅವರೇ ತಮಗೆ ಎಚ್1ಎನ್1 ಸೋಂಕು ತಗುಲಿರುವ ಕುರಿತು ಟ್ವಿಟರ್ ನಲ್ಲಿ ಟ್ವೀಟ್ ಮಾಡಿದ್ದರು.
ಅಮಿತ್ ಶಾ ಆರೋಗ್ಯದ ಮೇಲೆ ಏಮ್ಸ್ ನಿರ್ದೇಶಕ ರಣದೀಪ್ ಗುಲೇರಿಯಾ ನೇತೃತ್ವದ ವೈದ್ಯರ ತಂಡ ನಿಗಾ ವಹಿಸಿ ಚಿಕಿತ್ಸೆ ನೀಡಿತ್ತು. ಇದೀಗ ಚೇತರಿಸಿಕೊಂಡಿರುವ ಶಾ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ
Next Story