varthabharthi

ಕರಾವಳಿ

ಹಾಜಿ ಕೆ.ಎಸ್.ಹಮೀದ್ ನಿಧನ

ವಾರ್ತಾ ಭಾರತಿ : 11 Feb, 2019

ಕುಂದಾಪುರ, ಫೆ.11: ಉದ್ಯಮಿ, ಜೆಡಿಎಸ್ ಮುಖಂಡ ಹಾಜಿ ಕೆ.ಶಾಹುಲ್ ಹಮೀದ್ (78) ಸೋಮವಾರ ಬೆಳಗ್ಗೆ ಅಲ್ಪಕಾಲದ ಅಸೌಖ್ಯದಿಂದ ಕೋಟೇಶ್ವರ ದ ಹಳವಳ್ಳಿಯಲ್ಲಿರುವ ಸ್ವಗೃಹದಲ್ಲಿ ನಿಧನರಾದರು.

ಕೋಡಿ ಮುಹಿಯ್ಯುದ್ದೀನ್ ಜುಮಾ ಮಸೀದಿಯ ಕಾರ್ಯದರ್ಶಿಯಾಗಿ, ಜೆಡಿಎಸ್ ಅಲ್ಪಸಂಖ್ಯಾತ ಘಟಕದ ಉಡುಪಿ ಜಿಲ್ಲಾಧ್ಯಕ್ಷರಾಗಿ, ಉಡುಪಿ ಜಿಲ್ಲಾ ಸಂಯುಕ್ತ ಜಮಾಅತ್‌ನ ಸ್ಥಾಪಕಾಧ್ಯಕ್ಷರಾಗಿ, ಕುಂದಾಪುರ ಯುಸೂಫ್ ವಲಿ ಯುಲ್ಲಾ ದರ್ಗಾ ಕಮಿಟ ಪದಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಇವರು, ಹಲವು ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದರು.

ಮೃತರು ಪತ್ನಿ, ನಾಲ್ವರು ಪುತ್ರಿಯರು, ಇಬ್ಬರು ಪುತ್ರರ ಸಹಿತ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ. ಮೃತರ ಅಂತ್ಯ ಸಂಸ್ಕಾರವು ಇಂದು ಸಂಜೆ ಕುಂದಾಪುರ ದರ್ಗಾ ಕಂಪೌಂಡ್ ವಠಾರದಲ್ಲಿ ನೆರವೇರಿಸಲಾಯಿತು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)