varthabharthi

ಕರ್ನಾಟಕ

ಚಿಕ್ಕಮಗಳೂರು: ವಿದ್ಯುತ್ ಆಘಾತಕ್ಕೊಳಗಾಗಿ ಇಬ್ಬರು ಮೃತ್ಯು

ವಾರ್ತಾ ಭಾರತಿ : 11 Feb, 2019

ಚಿಕ್ಕಮಗಳೂರು, ಫೆ.11: ವಿದ್ಯುತ್ ಆಘಾತಕ್ಕೊಳಗಾಗಿ ಇಬ್ಬರು ಮೃತಪಟ್ಟು, ಓರ್ವ ಗಂಭೀರ ಗಾಯಗೊಂಡ ಘಟನೆ ಹರಿಹರದಳ್ಳಿ ಗ್ರಾಮದಲ್ಲಿ ರವಿವಾರ ರಾತ್ರಿ ನಡೆದಿದೆ.

ಮೃತರನ್ನು ಶಿವಕುಮಾರ್(35) ಹಾಗೂ ಭರತ್(20) ಎಂದು ಗುರುತಿಸಲಾಗಿದೆ. ಸಚಿನ್ ಎಂಬವರು ಗಂಭೀರ ಗಾಯಗೊಂಡಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಿರ್ಮಾಣ ಹಂತದಲ್ಲಿರುವ ಮನೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಶಿವಕುಮಾರ್ ಗಾರೆ ಕಾರ್ಮಿಕನಾಗಿದ್ದರೆ, ಭರತ್ ಕಾಫಿ ಕ್ಯೂರಿಂಗ್ ಕೆಲಸಗಾರರಾಗಿದ್ದರು.

ಘಟನೆಯ ಬಗ್ಗೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)