varthabharthi

ಕ್ರೀಡೆ

ಐಸಿಸಿ ಟ್ವೆಂಟಿ-20 ರ‍್ಯಾಂಕಿಂಗ್‌: ಕುಲದೀಪ್ ಯಾದವ್ ದ್ವಿತೀಯ ಸ್ಥಾನಕ್ಕೆ ಲಗ್ಗೆ

ವಾರ್ತಾ ಭಾರತಿ : 11 Feb, 2019

ದುಬೈ, ಫೆ.11:ಪ್ರತಿಭಾವಂತ ಸ್ಪಿನ್ ಬೌಲರ್ ಕುಲದೀಪ್ ಯಾದವ್ ಸೋಮವಾರ ಬಿಡುಗಡೆಯಾದ ಐಸಿಸಿ ಟ್ವೆಂಟಿ-20 ರ್ಯಾಂಕಿಂಗ್‌ನಲ್ಲಿ ಜೀವನಶ್ರೇಷ್ಠ ಸಾಧನೆ ಮಾಡಿದರು.

ಇದೇ ವೇಳೆ, ಭಾರತ ಟೀಮ್ ರ್ಯಾಂಕಿಂಗ್‌ನಲ್ಲಿ ಎರಡನೇ ಸ್ಥಾನ ಕಾಯ್ದುಕೊಂಡಿದೆ.

ಕುಲದೀಪ್ ನ್ಯೂಝಿಲೆಂಡ್ ವಿರುದ್ಧದ ಅಂತಿಮ ಟ್ವೆಂಟಿ-20 ಪಂದ್ಯದಲ್ಲಿ 26ಕ್ಕೆ 2 ವಿಕೆಟ್ ಪಡೆದಿದ್ದರು. ಆದಾಗ್ಯೂ ಭಾರತ 4 ರನ್‌ನಿಂದ ಸೋತು ಸರಣಿಯನ್ನು ಕಳೆದುಕೊಂಡಿತ್ತು.

ಕುಲದೀಪ್ ಹೊರತುಪಡಿಸಿ ಭಾರತದ ಬೇರ್ಯಾವ ಬೌಲರ್ ಅಗ್ರ-10ರಲ್ಲಿ ಸ್ಥಾನ ಪಡೆದಿಲ್ಲ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)