ಹುತಾತ್ಮ ಯೋಧ ಗುರು ಕುಟುಂಬಕ್ಕೆ ಸಿಎಂ ಸಾಂತ್ವನ
ಬೆಂಗಳೂರು, ಫೆ.15: ಹುತಾತ್ಮ ಯೋಧ ಎಚ್.ಗುರು ಅವರ ಕುಟುಂಬಕ್ಕೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ದೂರವಾಣಿ ಕರೆ ಮಾಡಿ ಸಾಂತ್ವನ ಹೇಳಿದ್ದಾರೆ.
ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ನಿನ್ನೆ ನಡೆದ ಉಗ್ರರ ದಾಳಿಯಲ್ಲಿ ಗುರು ಹುತಾತ್ಮರಾಗಿದ್ದಕ್ಕೆ ಮುಖ್ಯಮಂತ್ರಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಹುತಾತ್ಮ ಯೋಧನ ಕುಟುಂಬಕ್ಕೆ ರಾಜ್ಯ ಸರಕಾರವು ಆಸರೆಯಾಗಿ ನಿಲ್ಲುವುದಾಗಿ ಭರವಸೆ ನೀಡಿದ್ದಾರೆ.
Next Story