varthabharthi

ರಾಷ್ಟ್ರೀಯ

ಟಿಎಂಸಿ ಹಾಲಿ ಶಾಸಕ ಬಿಜೆಪಿಗೆ ಸೇರ್ಪಡೆ

ವಾರ್ತಾ ಭಾರತಿ : 14 Mar, 2019

ಹೊಸದಿಲ್ಲಿ, ಮಾ. 14: ತೃಣಮೂಲ ಕಾಂಗ್ರೆಸ್‌ನ ಹಾಲಿ ಶಾಸಕ ಗುರುವಾರ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಇದರಿಂದ ಪಶ್ಚಿಮಬಂಗಾಳದ ಮುಖ್ಯಮಂತ್ರಿ ಹಾಗೂ ಟಿಎಂಸಿ ವರಿಷ್ಟೆ ಮಮತಾ ಬ್ಯಾನರ್ಜಿ ಅವರಿಗೆ ತೀವ್ರ ಹಿನ್ನಡೆ ಉಂಟಾಗಿದೆ. ಸಿಂಗ್ ಅವರು ಉತ್ತರ 24 ಪರಗಣದ ಭಾಟ್ಪಾರ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಬಾರಕ್‌ಪೋರೆಯಿಂದ ದಿನೇಶ್ ತ್ರಿವೇದಿ ಅವರಿಗೆ ಲೋಕಸಭಾ ಟಿಕೆಟ್ ನೀಡಿರುವ ಪಕ್ಷದ ನಿರ್ಧಾರದಿಂದ ಸಿಂಗ್ ಅಸಮಾಧಾನಗೊಂಡಿದ್ದರು. ಮಂಗಳವಾರ ತೃಣಮೂಲ ಕಾಂಗ್ರೆಸ್‌ನ ಸಂಸದ ಅನುಪಮ್ ಹಝಾರೆ ಪಕ್ಷದ ನಾಯಕರಾದ ಕೈಲಾಸ್ ವಿಜಯವರ್ಗೀಯ ಹಾಗೂ ಮುಕುಲ್ ರಾಯ್ ಅವರ ಉಪಸ್ಥಿತಿಯಲ್ಲಿ ಬಿಜೆಪಿ ಸೇರಿದ್ದರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)