varthabharthi

ಕ್ರೀಡೆ

ಡೆಲ್ಲಿ ಕ್ಯಾಪಿಟಲ್ಸ್ ಗೆ ಗಂಗುಲಿ ಸಲಹೆಗಾರ

ವಾರ್ತಾ ಭಾರತಿ : 14 Mar, 2019

ಹೊಸದಿಲ್ಲಿ, ಮಾ.14: ಇಂಡಿಯನ್ ಪ್ರೀಮಿಯರ್ ಲೀಗ್‌ನ ಮುಂಬರುವ ಆವೃತ್ತಿಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸಲಹೆಗಾರರನ್ನಾಗಿ ಮಾಜಿ ಕ್ರಿಕೆಟಿಗ ಸೌರವ್ ಗಂಗುಲಿ ಅವರನ್ನು ಗುರುವಾರ ನೇಮಿಸಲಾಗಿದೆ.

ತಂಡದ ಮುಖ್ಯ ಕೋಚ್ ರಿಕಿ ಪಾಂಟಿಂಗ್ ಅವರೊಂದಿಗೆ ಗಂಗುಲಿ ಹೊಸ ಪಾತ್ರದಲ್ಲಿ ಕಾರ್ಯನಿರ್ವಹಿಸಲಿದ್ದಾರೆ. ‘‘ಡೆಲ್ಲಿ ಕ್ಯಾಪಿಟಲ್ಸ್ ಮಂಡಳಿಗೆ ನೇಮಕವಾಗಿರುವುದು ಖುಷಿ ತಂದಿದೆ. ಹಲವು ವರ್ಷಗಳಿಂದ ಜಿಂದಾಲ್ ಹಾಗೂ ಜೆಎಸ್‌ಡಬ್ಲು ಗ್ರೂಪ್‌ಗಳ ಬಗ್ಗೆ ತಿಳಿದಿದ್ದು, ಅವರ ಹೊಸ ಕ್ರೀಡಾ ಗುಂಪಿನ ಭಾಗವಾಗಿರುವುದು ಸಂತಸ ನೀಡಿದೆ. ತಂಡದ ಆಟಗಾರರು ಹಾಗೂ ಸಿಬ್ಬಂದಿಯೊಂದಿಗೆ ಹುದ್ದೆ ನಿರ್ವಹಿಸಲು ಎದುರು ನೋಡುತ್ತಿದ್ದೇನೆ’’ಎಂದಿದ್ದಾರೆ ಗಂಗುಲಿ. ಡೆಲ್ಲಿ ಕ್ಯಾಪಿಟಲ್ಸ್ ತಂಡ ಇದುವರೆಗೂ ಐಪಿಎಲ್ ಟ್ರೋಫಿ ಗೆದ್ದಿಲ್ಲ.

ಶ್ರೇಯಸ್ ಅಯ್ಯರ್ ನಾಯಕತ್ವದ ಡೆಲ್ಲಿ ತಂಡ ಮಾ.24ರಂದು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುವ ಈ ಆವೃತ್ತಿಯ ತನ್ನ ಮೊದಲ ಪಂದ್ಯದಲ್ಲಿ ಮುಂಬೈ ತಂಡವನ್ನು ಎದುರುಗೊಳ್ಳಲಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)