ವಿಜಯಪುರ: ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ; ಲಕ್ಷಾಂತರ ರೂ. ನಷ್ಟ
ವಿಜಯಪುರ,ಮಾ.23: ನಗರದ ಸ್ಟೇಶನ್ ರಸ್ತೆಯಲ್ಲಿರುವ ಸೇಂಗಾ ಚಿಕ್ಕಿ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ.
ಚಾಂದ್ ಮಹ್ಮದ್ ಎಂಬವರಿಗೆ ಸೇರಿದ ಚಿಕ್ಕಿ ಫ್ಯಾಕ್ಟರಿಯಲ್ಲಿ ಚಿಕ್ಕಿ ತಯಾರಿಸುವಾಗ ಆಕಸ್ಮಿಕವಾಗಿ ಬೆಂಕಿ ತಗುಲಿದೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದು, ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Next Story