varthabharthi

ನಿಧನ

ಹಮ್ಮಬ್ಬ

ವಾರ್ತಾ ಭಾರತಿ : 7 Apr, 2019

ಮಂಗಳೂರು, ಎ.7: ಮಳಲಿ ಜುಮಾ ಮಸೀದಿಯ ಹಿರಿಯ ಸದಸ್ಯ ಹಮ್ಮಬ್ಬ ಮಂಗಳೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ರಾತ್ರಿ ನಿಧನ ಹೊಂದಿದರು.

ಮೃತರು ಮಳಲಿ ಮಸೀದಿಯಲ್ಲಿ ಹಲವು ವರ್ಷಗಳ ಕಾಲ ಮುಖ್ಯ ಸಲಹೆಗಾರರಾಗಿ ಕಾರ್ಯ ನಿರ್ವಹಿಸಿದ್ದರು. ಮೃತರು ಪತ್ನಿ, ನಾಲ್ವರು ಗಂಡುಮಕ್ಕಳು, ಮೂವರು ಹೆಣ್ಣುಮಕ್ಕಳು ಸಹಿತ ಸಹೋದರ, ಮಳಲಿ ಜುಮಾ ಮಸೀದಿ ಅಧ್ಯಕ್ಷ ಮಾಮು ಮನೇಲ್ ಹಾಗೂ ಅಪಾರ ಬಂಧು-ಬಳಗ ಅಗಲಿದ್ದಾರೆ. ಮೃತರ ದಫನ್ ಕಾರ್ಯವು ಮಳಲಿ ಜುಮ್ಮಾ ಮಸೀದಿ ವಠಾರದಲ್ಲಿ ರವಿವಾರ ನೆರವೇರಿತು.

ಸಂತಾಪ:  ಮಾಜಿ ಶಾಸಕ ಮೊಯ್ದಿನ್ ಬಾವ, ಬ್ಯಾರಿ ಪರಿಷತ್ ಅಧ್ಯಕ್ಷ ಅಬ್ದುಲ್ ಮಜೀದ್ ಸೂರಲ್ಪಾಡಿ, ಸಲಹೆಗಾರ ಮುಹಮ್ಮದ್ ಅಲಿ, ಜಿಪಂ ಸದಸ್ಯ ಯು.ಪಿ. ಇಬ್ರಾಹೀಂ, ತಾಪಂ ಸದಸ್ಯ ಸುನೀಲ್‌ಕುಮಾರ್, ಮಳಲಿ ಜುಮಾ ಮಸೀದಿ ಮಾಜಿ ಅಧ್ಯಕ್ಷ ಯೂಸುಫ್ ಹಾಜಿ, ಗಂಜಿಮಠ ಗ್ರಾಪಂ ಉಪಾಧ್ಯಕ್ಷ ಆರ್.ಎಸ್.ಜಾಕೀರ್, ಗುರುಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಂದ್ರ ಕಾಂಬಳಿ, ಗ್ರಾಪಂ ಸದಸ್ಯ ಅಬ್ದುಲ್ ಹಮೀದ್, ಬೂಬ, ಶಾ ನವಾಝ್ ಮೃತರಿಗೆ ಸಂತಾಪ ಸೂಚಿಸಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)