varthabharthi

ಕರಾವಳಿ

ವಾಹನ ಅಪಘಾತ: ಕುಂದಾಪುರ ಹೆಡ್‌ಕಾನ್‌ಸ್ಟೇಬಲ್ ಮೃತ್ಯು

ವಾರ್ತಾ ಭಾರತಿ : 15 Apr, 2019

ಬ್ರಹ್ಮಾವರ, ಎ.14: ಕುಮ್ರಗೋಡು ಕ್ರಾಸ್ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಟೆಂಪೊವೊಂದು ಢಿಕ್ಕಿ ಬೈಕಿಗೆ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಬೈಕ್ ಸವಾರ ಕುಂದಾಪುರ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೇಬಲ್ ಚಂದ್ರಶೇಖರ(42) ಎಂಬವರು ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ.

ಎ.14ರಂದು ಸಂಜೆ ವೇಳೆ ಬ್ರಹ್ಮಾವರದಿಂದ ಸಾಸ್ತಾನ ಕಡೆಗೆ ಹೋಗುತ್ತಿದ್ದ ಚಂದ್ರ ಶೇಖರ್ ಅವರ ಬೈಕಿಗೆ ಹಿಂದಿನಿಂದ ಬಂದ 407 ಟೆಂಪೋ ಅತೀವೇಗ ಹಾಗೂ ಅಜಾಗರೂಕತೆಯಿಂದ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಅಪಘಾತ ನಡೆಸಿದ ಟೆಂಪೋ ಚಾಲಕನು ಟೆಂಪೋವನ್ನು ನಿಲ್ಲಿಸದೇ ಪರಾರಿಯಾಗಿದ್ದಾನೆ.

ಇದರ ಪರಿಣಾಮ ಬೈಕ್ ಸವಾರ ಚಂದ್ರಶೇಖರ ಬೈಕ್ ಸಮೇತ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡಿದ್ದರು. ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಮೃತಪಟ್ಟರೆಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಪ್ಪಿನಕುದ್ರು ನಿವಾಸಿಯಾಗಿರುವ ಚಂದ್ರಶೇಖರ್ ಕಳೆದ 17 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದು, ಮೂರು ವರ್ಷಗಳಿಂದ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಹೆಡ್‌ಕಾನ್‌ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)