varthabharthi

ಬೆಂಗಳೂರು

ದ್ವಿತೀಯ ಪಿಯು ಪರೀಕ್ಷೆಯಲ್ಲಿ ಉಡುಪಿ ಜಿಲ್ಲೆಯ ಸಾಧನೆ: ಸಚಿವೆ ಡಾ.ಜಯಮಾಲಾ ಸಂತಸ

ವಾರ್ತಾ ಭಾರತಿ : 15 Apr, 2019

ಬೆಂಗಳೂರು, ಎ.15: ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯಲ್ಲಿ ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನದ ಸಾಧನೆಗೈದಿರುವುದು ತನಗೆ ಸಂತಸ ತಂದಿದೆ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಡಾ.ಜಯಮಾಲಾ ಹೇಳಿದ್ದಾರೆ.

ಈ ಶೈಕ್ಷಣಿಕ ಗರಿಮೆ ಕೈಗೂಡುವಲ್ಲಿ ಉಡುಪಿ ಜಿಲ್ಲೆಯ ಶಿಕ್ಷಣ ಸಂಸ್ಥೆಗಳು, ಶಿಕ್ಷಕರು, ಪಾಲಕರು ಮತ್ತು ವಿದ್ಯಾರ್ಥಿಗಳ ಪರಿಶ್ರಮವನ್ನು ನಾನು ಪ್ರಶಂಸಿಸುತ್ತೇನೆ. ಉಡುಪಿ ಜಿಲ್ಲೆಯು ಮೊದಲಿನಿಂದಲೂ ಶೈಕ್ಷಣಿಕ ಸಾಧನೆಗೆ ಹೆಸರುವಾಸಿಯಾಗಿದೆ. ಈ ಹಿರಿಮೆಯನ್ನು ಮುಂದೆಯೂ ಕಾಪಾಡಿಕೊಂಡು ಹೋಗುವಲ್ಲಿ ಯಶಸ್ವಿಯಾಗಲಿ ಎಂದು ನಾನು ಆಶಿಸುತ್ತೇನೆ ಎಂದವರು ಹಾರೈಸಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)