ಗ್ಯಾಸ್ ಸಿಲಿಂಡರ್ ಸ್ಫೋಟ: ಮೂವರು ಸಾವು
ಬೆಂಗಳೂರು, ಎ. 17: ಮನೆಯೊಂದರಲ್ಲಿ ಆಕಸ್ಮಿಕವಾಗಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮೂವರು ಮೃತಪಟ್ಟಿರುವ ದುರ್ಘಟನೆ ಇಲ್ಲಿನ ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾಗಿದೆ.
ಬಾಣಸವಾಡಿಯ ಮುರುಗನ್ ಚಿತ್ರಮಂದಿರ ಬಳಿ ಮಂಗಳವಾರ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಬಿಹಾರ ಮೂಲದ ನಾಲ್ವರು ಮನೆಯಲ್ಲಿದ್ದ ವೇಳೆ ಈ ಘಟನೆ ನಡೆದಿದೆ. ಮನೆಯಲ್ಲಿ ಅಡುಗೆ ಮಾಡುವಾಗ ಸಿಲಿಂಡರ್ ಸ್ಫೋಟಗೊಂಡಿದೆ. ಘಟನೆಯಲ್ಲಿ ಗಾಯಗೊಂಡಿದ್ದ ನಾಲ್ವರನ್ನು ವಿಕ್ಟೋರಿಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದರಲ್ಲಿ ಮೂವರು ಮೃತಪಟ್ಟಿದ್ದು, ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ.
ಈ ಬಗ್ಗೆ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Next Story