varthabharthi

ಕರ್ನಾಟಕ

ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ

ರಾಯಚೂರು ವಿದ್ಯಾರ್ಥಿನಿಯ ಅನುಮಾನಾಸ್ಪದ ಸಾವು ಪ್ರಕರಣ: ಓರ್ವನ ಬಂಧನ

ವಾರ್ತಾ ಭಾರತಿ : 19 Apr, 2019

ರಾಯಚೂರು, ಎ.19: ಇಲ್ಲಿನ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

ಇತ್ತೀಚೆಗೆ ಇಂಜಿನಿಯರಿಂಗ್ ವಿದ್ಯಾರ್ಥಿನಿಯ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಮಗಳ ಸಾವಿನ ಬಗ್ಗೆ ಪೋಷಕರು ಅನುಮಾನ ವ್ಯಕ್ತಪಡಿಸಿದ್ದು, ದೂರು ದಾಖಲಿಸಿದ್ದರು.

ಇದೀಗ ಈ ಪ್ರಕರಣ ತಿರುವು ಪಡೆದುಕೊಂಡಿದ್ದು, ಅತ್ಯಾಚಾರಗೈದು ವಿದ್ಯಾರ್ಥಿನಿಯನ್ನು ಕೊಲೆಗೈಯಲಾಗಿದೆ ಎನ್ನುವ ಸಂಶಯ ವ್ಯಕ್ತವಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

ವಿದ್ಯಾರ್ಥಿನಿ ಮಧು ಸಾವಿಗೆ ಸಂಬಂಧಿಸಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದ್ದು, #JusticeForMadhu ಹ್ಯಾಶ್ ಟ್ಯಾಗ್ ನಡಿ ಅಭಿಯಾನ ಆರಂಭವಾಗಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)