varthabharthi

ರಾಷ್ಟ್ರೀಯ

ರಾಹುಲ್ ಗಾಂಧಿಗೆ ನ್ಯಾಯಾಂಗ ನಿಂದನೆ ನೋಟಿಸ್ ಜಾರಿಮಾಡಿದ ಸುಪ್ರೀಂಕೋರ್ಟ್

ವಾರ್ತಾ ಭಾರತಿ : 23 Apr, 2019

 ಹೊಸದಿಲ್ಲಿ, ಎ.23: ರಫೇಲ್ ಒಪ್ಪಂದಕ್ಕೆ ಸಂಬಂಧಿಸಿ ಸುಪ್ರೀಂಕೋರ್ಟ್ ನೀಡಿದ ತೀರ್ಪಿನ ಬಗ್ಗೆ ತಪ್ಪಾಗಿ ಪ್ರತಿಕ್ರಿಯಿಸಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ಸುಪ್ರೀಂಕೋರ್ಟ್ ಮಂಗಳವಾರ ನ್ಯಾಯಾಂಗ ನಿಂದನೆ ನೋಟಿಸ್ ಕಳುಹಿಸಿದೆ.

ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಸಂಸದೆ ಮೀನಾಕ್ಷಿ ಲೇಖಿ ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿ ಹಾಗೂ ರಫೇಲ್ ಜೆಟ್ ಒಪ್ಪಂದದ ಬಗ್ಗೆ 2018ರ ಡಿ.14 ರಂದು ನೀಡಲಾಗಿರುವ ತೀರ್ಪಿನ ಪುನರ್‌ಪರಿಶೀಲನಾ ಅರ್ಜಿಯ ವಿಚಾರಣೆಯನ್ನು ಎ.30ಕ್ಕೆ ನಡೆಸಲಾಗುವುದು ಎಂದು ಸರ್ವೋಚ್ಚ ನ್ಯಾಯಾಲಯ ತಿಳಿಸಿದೆ.

ಲೇಖಿ ತನ್ನ ವಿರುದ್ಧ ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿಯನ್ನು ರದ್ದುಗೊಳಿಸಬೇಕೆಂಬ ರಾಹುಲ್ ಗಾಂಧಿಯ ಮನವಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ.

‘‘ನ್ಯಾಯಾಂಗ ನಿಂದನೆ ಅರ್ಜಿಗೆ ಸಂಬಂಧಿಸಿ ಗಾಂಧಿ ಪರ ಹಾಜರಾದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದವನ್ನು ಆಲಿಸಿದ ಬಳಿಕ ಪ್ರತಿವಾದಿ ರಾಹುಲ್ ಗಾಂಧಿಗೆ ನೋಟಿಸ್ ಜಾರಿ ಮಾಡುವುದು ಸೂಕ್ತ ಎಂದು ಪರಿಗಣಿಸಿದ್ದೇವೆ’’ ಎಂದು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ಪೀಠ ತಿಳಿಸಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)