varthabharthi

ಮಾಹಿತಿ - ಮಾರ್ಗದರ್ಶನ

ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶಾವಕಾಶ

ವಾರ್ತಾ ಭಾರತಿ : 27 Apr, 2019

ಉಡುಪಿ, ಎ.27:2019-20ನೇ ಸಾಲಿಗೆ ಉಡುಪಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆರ್ಥಿಕವಾಗಿ ಹಿಂದುಳಿದಿರುವ ಪರಿಶಿಷ್ಟ ಜಾತಿಯ ಪ್ರತಿಭಾವಂತ ವಿದ್ಯಾರ್ಥಿಗಳನ್ನು, ಇಲಾಖೆ ವತಿಯಿಂದ ಗುರುತಿಸಲಾಗಿರುವ ವಸತಿ ಸೌಲಭ್ಯ ಹೊಂದಿರುವ ಪ್ರತಿಷ್ಠಿತ ಶಾಲೆಯ 6ನೇ ತರಗತಿಗೆ ಸೇರ್ಪಡೆ ಮಾಡಲು ಸರಕಾರ ಅವಕಾಶ ಕಲ್ಪಿಸಿದೆ.

ಇಂಥ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯ 2 ಲಕ್ಷ ರೂ. ಮಿತಿ ಯೊಳಗಿರಬೇಕು. 5ನೇ ತರಗತಿಯ ಅಂತಿಮ ಪರೀಕ್ಷೆಯಲ್ಲಿ ಶೇ.60ಕ್ಕಿಂತ ಹೆಚ್ಚಿನ ಅಂಕ ಪಡೆದಿರುವ ಪರಿಶಿಷ್ಟ ಜಾತಿಯ ಒಟ್ಟು ಐವರು ವಿದ್ಯಾರ್ಥಿಗಳನ್ನು 6ನೆ ತರಗತಿಗೆ ಸೇರಿಸಿಕೊಳ್ಳಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

ಆಸಕ್ತ ವಿದ್ಯಾರ್ಥಿಗಳು ಅರ್ಜಿಯನ್ನು ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ರಜತಾದ್ರಿ, ಮಣಿಪಾಲ, ಉಡುಪಿ ಇಲ್ಲಿ ಎ.29ರಿಂದ ಪಡೆದು ಭರ್ತಿ ಮಾಡಿ, ಬೇಕಾದ ಎಲ್ಲಾ ದಾಖಲೆಗಳೊಂದಿಗೆ ಮೇ 10ರೊಳಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗೆ ಸಮಾಜ ಕಲ್ಯಾಣ ಇಲಾಖೆಯ ದೂರವಾಣಿ ಸಂಖ್ಯೆ: 0820-2574892ನ್ನು ಸಂಪರ್ಕಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)