varthabharthi

ಕ್ರೀಡೆ

ಇಟಾಲಿಯನ್ ಓಪನ್

ಸ್ಪರ್ಧೆಯಿಂದ ಹಿಂದೆ ಸರಿದ ಸೆರೆನಾ

ವಾರ್ತಾ ಭಾರತಿ : 15 May, 2019

ರೋಮ್,ಮೇ 14: ಇಟಾಲಿಯನ್ ಓಪನ್ ಟೆನಿಸ್ ಟೂರ್ನಮೆಂಟ್‌ನ ಮಹಿಳೆಯರ ಸಿಂಗಲ್ಸ್ ಸ್ಪರ್ಧೆಯಿಂದ ಸೆರೆನಾ ವಿಲಿಯಮ್ಸ್ ಹಿಂದೆ ಸರಿದಿದ್ದಾರೆ. ಬಲ ಮಂಡಿನೋವಿನಿಂದ ಬಳಲುತ್ತಿರುವ ಸೆರೆನಾ ವಿಲಿಯಮ್ಸ್ ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ ಎಂದು ಟೂರ್ನಿಯ ಆಯೋಜಕರು ತಿಳಿಸಿದ್ದಾರೆ.

ಮೊದಲ ಸುತ್ತಿನಲ್ಲಿ ಸ್ವೀಡನ್‌ನ ರೆಬೆಕ್ಕಾ ಪೀಟರ್ಸನ್‌ರನ್ನು 6-4,6-2 ನೇರ ಸೆಟ್‌ಗಳಿಂದ ಸೋಲಿಸಿದ್ದ 23 ಬಾರಿಯ ಗ್ರಾನ್‌ಸ್ಲಾಮ್ ಚಾಂಪಿಯನ್ ಸೆರೆನಾ 2ನೇ ಸುತ್ತಿನಲ್ಲಿ ಹಿರಿಯ ಸಹೋದರಿ ವೀನಸ್ ವಿಲಿಯಮ್ಸ್‌ರನ್ನು ಎದುರಿಸಬೇಕಾಗಿತ್ತು. ಇದೀಗ ಸೆರೆನಾ ಹಿಂದೆ ಸರಿದ ಕಾರಣ ವೀನಸ್ 3ನೇ ಸುತ್ತಿಗೆ ಪ್ರವೇಶಿಸಿದ್ದು, ಜೊಹನ್ನಾ ಕಾಂಟಾ ಅಥವಾ ಸ್ಲೋಯಾನ್ ಸ್ಟೀಫನ್ಸ್‌ರನ್ನು ಎದುರಿಸಲಿದ್ದಾರೆ. ಸೋಮವಾರ ನಡೆದ ಮೊದಲ ಸುತ್ತಿನ ಪಂದ್ಯದಲ್ಲಿ ವೀನಸ್ ಬೆಲ್ಜಿಯಂನ ಎಲಿಸ್ ಮಾರ್ಟೆನ್ಸ್‌ರನ್ನು 7-5, 3-6,7-6(7/4)ಸೆಟ್‌ಗಳಿಂದ ಮಣಿಸಿದ್ದರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)