varthabharthi

ಬೆಂಗಳೂರು

ಬರ ಪರಿಸ್ಥಿತಿ ಕುರಿತು ಮುಖ್ಯಮಂತ್ರಿ ಕುಮಾರಸ್ವಾಮಿ ವೀಡಿಯೊ ಕಾನ್ಫರೆನ್ಸ್

ವಾರ್ತಾ ಭಾರತಿ : 15 May, 2019

ಬೆಂಗಳೂರು: ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಇಂದು ಕಲಬುರಗಿ ಮತ್ತು ಧಾರವಾಡ ಜಿಲ್ಲೆಗಳನ್ನು ಹೊರತು ಪಡಿಸಿ ಉಳಿದ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ವೀಡಿಯೊ ಕಾನ್ಫರೆನ್ಸ್ ಪ್ರಾರಂಭಿಸಿದ್ದಾರೆ.

ಕಂದಾಯ ಸಚಿವ ಆರ್.ವಿ.ದೇಶಪಾಂಡೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಕೃಷ್ಣ ಬೈರೇಗೌಡ, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಅಭಿವೃದ್ಧಿ ಆಯುಕ್ತರಾದ ವಂದಿತಾ ಶರ್ಮಾ, ಕಂದಾಯ,   ಆರ್ಥಿಕ, ಕೃಷಿ, ತೋಟಗಾರಿಕೆ, ಪಶು ಸಂಗೋಪನೆ, ಗ್ರಾಮೀಣಾಭಿವೃದ್ಧಿ, ನಗರಾಭಿವೃದ್ಧಿ, ಜಲಸಂಪನ್ಮೂಲ, ಸಣ್ಣ ನೀರಾವರಿ, ಇಲಾಖೆಯ ಹಿರಿಯ ಅಧಿಕಾರಿಗಳು ವೀಡಿಯೊ ಕಾನ್ಫರೆನ್ಸ್ ನಲ್ಲಿ ಪಾಲ್ಗೊಂಡಿದ್ದಾರೆ.

ಈ ಸಂದರ್ಭದಲ್ಲಿ ಅವರು ಅಧಿಕಾರಿಗಳೊಂದಿಗೆ ಕುಡಿಯುವ ನೀರಿನ ವ್ಯವಸ್ಥೆ, ಜಾನುವಾರು ಸಂರಕ್ಷಣೆಗಾಗಿ ಮೇವು ಲಭ್ಯತೆ, ಗೋಶಾಲೆ ಹಾಗೂ ಮೇವು ಬ್ಯಾಂಕ್, ಉದ್ಯೋಗ ಸೃಜನೆ ಕಾಮಗಾರಿಗಳ ಪ್ರಗತಿ ಕುರಿತು ಚರ್ಚಿಸಲಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)