varthabharthiರಾಷ್ಟ್ರೀಯ

ಪಶ್ಚಿಮಬಂಗಾಳದಲ್ಲಿ ಚುನಾವಣಾ ಪ್ರಚಾರ ಒಂದು ದಿನ ಕಡಿತಗೊಳಿಸಿದ ಚು. ಆಯೋಗ

ವಾರ್ತಾ ಭಾರತಿ : 15 May, 2019

ಕೋಲ್ಕೊತ್ತಾ, ಮೇ 15: ಪಶ್ಚಿಮಬಂಗಾಳದಲ್ಲಿ ಇತ್ತೀಚೆಗೆ ಚುನಾವಣಾ ಸಂಬಂಧಿ ಹಿಂಸಾಚಾರ ಸಂಭವಿಸಿದ ಹಿನ್ನೆಲೆಯಲ್ಲಿ ಚುನಾವಣಾ ಪ್ರಚಾರದ ದಿನವನ್ನು ಚುನಾವಣಾ ಆಯೋಗ 1 ದಿನ ಕಡಿತಗೊಳಿಸಿದೆ.

  ಬಿಜೆಪಿ ಅಧ್ಯಕ್ಷ ಅಮಿತ್ ಶಾ ರ್ಯಾಲಿಯಲ್ಲಿ ಹಿಂಸಾಚಾರದ ಹಿನ್ನೆಲೆಯಲ್ಲಿ ಆಡಳಿತಾರೂಢ ತೃಣಮೂಲ ಪಕ್ಷ ಹಾಗೂ ಬಿಜೆಪಿ ನಡುವೆ ವಾಕ್ಸಮರ ನಡೆದ ಬಳಿಕ ಚುನಾವಣಾ ಆಯೋಗ ಮೊದಲ ಬಾರಿಗೆ ಈ ರೀತಿಯ ನಿರ್ಧಾರ ತೆಗೆದುಕೊಂಡಿದೆ.

ಇದಕ್ಕೆ ಸಂಬಂಧಿಸಿ ಪಶ್ಚಿಮಬಂಗಾಳದ ಇಬ್ಬರು ಹಿರಿಯ ಅಧಿಕಾರಿಗಳಾದ ಪ್ರಾಥಮಿಕ ಗೃಹ ಕಾರ್ಯದರ್ಶಿ ಅತ್ರಿ ಭಟ್ಟಾಚಾರ್ಯ ಹಾಗೂ ಹೆಚ್ಚುವರಿ ಪ್ರಧಾನ ನಿರ್ದೇಶಕ ರಾಜೀವ್ ಕುಮಾರ್ ಅವರನ್ನು ಚುನಾವಣಾ ಆಯೋಗ ವಜಾಗೊಳಿಸಿದೆ.

 ಚುನಾವಣಾ ಸಂಬಂಧಿ ಹಿಂಸಾಚಾರ ಸಂಭವಿಸಿದ ಬಳಿಕ ಪಶ್ಚಿಮಬಂಗಾಳ ದಲ್ಲಿ ಚುನಾವಣಾ ಆಯೋಗ ಚುನಾವಣಾ ಪ್ರಚಾರವನ್ನು ಒಂದು ದಿನ ಕಡಿತಗೊಳಿಸಿದೆ. ಪಶ್ಚಿಮಬಂಗಾಳದ 9 ಕ್ಷೇತ್ರಗಳಲ್ಲಿ ಚುನಾವಣಾ ಪ್ರಚಾರ ಗುರುವಾರ ರಾತ್ರಿ 10 ಗಂಟೆಗೆ ಅಂತ್ಯಗೊಳ್ಳಬೇಕಿತ್ತು. ಆದರೆ, ಚುನಾವಣಾ ಆಯೋಗ ಬುಧವಾರ ಸಂಜೆಯೇ ಅಂತ್ಯಗೊಳಿಸಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)