varthabharthi

ರಾಷ್ಟ್ರೀಯ

ಪುಲ್ವಾಮಾದಲ್ಲಿ ಎನ್‌ಕೌಂಟರ್: ಸೈನಿಕ ಹುತಾತ್ಮ, ಇಬ್ಬರು ಉಗ್ರರು ಬಲಿ

ವಾರ್ತಾ ಭಾರತಿ : 16 May, 2019

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಗುರುವಾರ ಬೆಳಗ್ಗೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಹತರಾಗಿದ್ದು, ಒಬ್ಬ ಯೋಧ ಕೂಡಾ ಹುತಾತ್ಮರಾಗಿದ್ದಾರೆ.

ಕೇಂದ್ರೀಯ ಮೀಸಲು ಪೊಲೀಸ್ ಪಡೆ, ರಾಷ್ಟ್ರೀಯ ರೈಫಲ್ಸ್ ಮತ್ತು ವಿಶೇಷ ಕಾರ್ಯಾಚರಣೆ ಗುಂಪು ಶೋಧ ಕಾರ್ಯಾಚರಣೆ ನಡೆಸುವ ವೇಳೆ ಉಗ್ರಗಾಮಿಗಳು ಇವರತ್ತ ಗುಂಡು ಹಾರಿಸಿದರು. ಈ ಹಿನ್ನೆಲೆಯಲ್ಲಿ ಎನ್‌ಕೌಂಟರ್ ನಡೆದಿದೆ ಎಂದು ಅಧಿಕೃತ ಮೂಲಗಳು ಹೇಳಿವೆ.

ಘಟನೆಯಲ್ಲಿ ಇತರ ಇಬ್ಬರು ಸೈನಿಕರು ಹಾಗೂ ಓರ್ವ ನಾಗರಿಕ ಗಾಯಗೊಂಡಿದ್ದಾರೆ. ಇಬ್ಬರು ಉಗ್ರರು ಮನೆಯೊಂದರಲ್ಲಿ ಅವಿತಿದ್ದರು ಎನ್ನಲಾಗಿದೆ. ಕಾರ್ಯಾಚರಣೆ ಮುಂದುವರಿದಿದ್ದು, ಈ ಪ್ರದೇಶದಲ್ಲಿ ಇಂಟರ್‌ನೆಟ್ ಸಂಪರ್ಕ ಕಡಿತಗೊಳಿಸಲಾಗಿದೆ.

ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)