'ಬಳೆ ತೊಟ್ಟುಕೊಳ್ಳಲಿ' ಎಂದ ಶೋಭಾಗೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದು ಹೀಗೆ..
ಬೆಂಗಳೂರು, ಮೇ 16: ಕುಮಾರಿ @ShobhaBJP ಅವರೇ, ಓರ್ವ ಹೆಣ್ಣಾಗಿ ತಾವು ಮಹಿಳಾ ಸಂಕುಲವೇ ಅಸಮರ್ಥರು ಎಂಬಂತೆ ಕೀಳು ಹೇಳಿಕೆ ನೀಡಿರುವುದು ಸರಿಯಲ್ಲ ಎಂದು ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ
'ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ಶಕ್ತಿ ಇದ್ದರೆ ತಮ್ಮ ಶಾಸಕರನ್ನ ಹಿಡಿದಿಟ್ಟಿಕೊಳ್ಳಲಿ. ಸಾಧ್ಯವಾಗದಿದ್ದರೆ ಕೈಗೆ ಬಳೆ ತೊಟ್ಟುಕೊಳ್ಳಲಿ' ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿಕೆಗೆ ಖಾರವಾಗಿ ಉತ್ತರಿಸಿರುವ ಸಿದ್ದರಾಮಯ್ಯ ಅವರು "ಸಂಸದರಾಗಿ ತಾವೊಬ್ಬರು ಸರಿಯಾಗಿ ಕೆಲಸ ಮಾಡಿಲ್ಲ ಎಂಬ ಮಾತ್ರಕ್ಕೆ ಬಳೆ ತೊಟ್ಟವರೆಲ್ಲ ಕೆಲಸ ಮಾಡಲಾಗದವರು ಎಂದಲ್ಲ. ನೆನಪಿರಲಿ, ಚೆನ್ನಮ್ಮ,ಓಬವ್ವ, ಇಂದಿರಾಗಾಂಧಿ ಇವರೆಲ್ಲ ಬಳೆ ತೊಟ್ಟೆ ಸಾಧನೆಯ ಉತ್ತುಂಗಕ್ಕೇರಿದವರು'' ಎಂದು ಟ್ವೀಟ್ ಮಾಡಿದ್ದಾರೆ
Next Story