varthabharthi

ಕರ್ನಾಟಕ

ಇಬ್ಬರು ಐಎಎಸ್ ಅಧಿಕಾರಿಗಳ ವರ್ಗಾವಣೆ

ವಾರ್ತಾ ಭಾರತಿ : 16 May, 2019

ಬೆಂಗಳೂರು, ಮೇ 16: ರಾಜ್ಯ ಸರಕಾರವು ಇಬ್ಬರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅಂಜುಮ್ ಪರ್ವೆಝ್‌ರನ್ನು ನಗರಾಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ.

ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ(ಆಡಳಿತ ಸುಧಾರಣೆ, ತರಬೇತಿ ಹಾಗೂ ರಾಜಕೀಯ ಪಿಂಚಣಿ)ಯ ಅಪರ ಮುಖ್ಯಕಾರ್ಯದರ್ಶಿ ವಿ.ಮಂಜುಳಾರನ್ನು ಡಿಪಿಎಆರ್ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿಯನ್ನಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)