varthabharthi

ಕರಾವಳಿ

ವಿದ್ವಾಂಸ ಕೊರ್ಲಹಳ್ಳಿಗೆ ‘ಪರವಿದ್ಯಾಮಾನ್ಯ’ ಪ್ರಶಸ್ತಿ ಪ್ರದಾನ

ವಾರ್ತಾ ಭಾರತಿ : 16 May, 2019

 ಉಡುಪಿ, ಮೇ 16: ಪರ್ಯಾಯ ಪಲಿಮಾರು ಮಠದ ಆಶ್ರಯದಲ್ಲಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆದಿರುವ ಪಲಿಮಾರು ಮಠದ ಶ್ರೀವಿದ್ಯಾಮಾನ್ಯತೀರ್ಥ ಶ್ರೀ ಆರಾಧನೆಯ ಪ್ರಯುಕ್ತ ‘ಪರವಿದ್ಯಾಮಾನ್ಯ’ ಪ್ರಶಸ್ತಿಯನ್ನು ಹಿರಿಯ ವಿದ್ವಾಂಸರಾದ ಕೊರ್ಲಹಳ್ಳಿ ನರಸಿಂಹಾಚಾರ್ಯರಿಗೆ ಪ್ರದಾನ ಮಾಡಲಾಯಿತು.

 ಪರ್ಯಾಯ ಪೇಜಾವರ ಮಠದ ಶ್ರೀವಿದ್ಯಾಧೀಶ ತೀರ್ಥರು ಪೇಜಾವರ ಮಠದ ಹಿರಿಯ ಮಠಾಧೀಶರಾದ ಶ್ರೀವಿಶ್ವೇಶತೀರ್ಥ ಶ್ರೀ ಯೊಂದಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಶ್ರೀವಿದ್ಯಾಮಾನ್ಯತೀರ್ಥ ಶ್ರೀ  ಸಂಸ್ಮರಣೆ ಯೂ ಇದೇ ಸಂದರ್ಭದಲ್ಲಿ ನಡೆಯಿತು.

ಪೇಜಾವರ ಮಠದ ಕಿರಿಯ ಯತಿಗಳಾದ ಶ್ರೀವಿಶ್ವಪ್ರಸನ್ನ ತೀರ್ಥ ಶ್ರೀ , ಅದಮಾರು ಮಠದ ಕಿರಿಯ ಮಠಾಧೀಶ ಶ್ರೀಈಶಪ್ರಿಯತೀರ್ಥ ಶ್ರೀ , ಪಲಿಮಾರು ಮಠದ ಕಿರಿಯ ಮಠಾಧೀಶ ಶ್ರೀ ವಿದ್ಯಾರಾಜೇಶ್ವರ ತೀರ್ಥ ಶ್ರೀ , ಪ್ರಯಾಗ ಮಠದ ಶ್ರೀವಿದ್ಯಾತ್ಮತೀರ್ಥ ಶ್ರೀ  ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)