varthabharthi

ಕರಾವಳಿ

ಲಾರಿ ಢಿಕ್ಕಿ: ಸೈಕಲ್ ಸವಾರ ಮೃತ್ಯು

ವಾರ್ತಾ ಭಾರತಿ : 16 May, 2019

ಕೋಟ, ಮೇ 16: ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಸೈಕಲ್ ಸವಾರ ಮೃತಪಟ್ಟ ಘಟನೆ ಮೇ 15ರಂದು ಮಧ್ಯಾಹ್ನ ವೇಳೆ ಸಾಸ್ತಾನ ಜಂಕ್ಷನ್ ಹತ್ತಿರ ನಡೆದಿದೆ.

ಮೃತರನ್ನು ಗುಂಡು ಪೂಜಾರಿ(53) ಎಂದು ಗುರುತಿಸಲಾಗಿದೆ.

ಉಡುಪಿ ಕಡೆಯಿಂದ ಕುಂದಾಪುರ ಕಡೆಗೆ ಹೋಗುತ್ತಿದ್ದ ಲಾರಿ ಕೋಡಿಕನ್ಯಾನ ಕಡೆಯಿಂದ ಸಾಸ್ತಾನ ಟೋಲ್ ಕಡೆಗೆ ಹೋಗುತ್ತಿದ್ದ ಸೈಕಲ್‌ಗೆ ಹಿಂದಿನಿಂದ ಢಿಕ್ಕಿ ಹೊಡೆ ಯಿತ್ತೆನ್ನಲಾಗಿದೆ. ಇದರಿಂದ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಗುಂಡು ಪೂಜಾರಿ ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗು ವಾಗ ಮೃತಪಟ್ಟಿದ್ದಾರೆ.

ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)