varthabharthi

ಕರಾವಳಿ

ಮಾಜಿ ಪ್ರಧಾನಿ ದೇವೇಗೌಡ ಧರ್ಮಸ್ಥಳಕ್ಕೆ ಭೇಟಿ

ವಾರ್ತಾ ಭಾರತಿ : 16 May, 2019

ಬೆಳ್ತಂಗಡಿ: ಮಾಜಿ ಪ್ರಧಾನಿ ಜನತಾದಳ ಜಾತ್ಯಾತೀತ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್ ಡಿ ದೇವೇಗೌಡ ಅವರು ಇಂದು ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಧಸ್ವಾಮಿಯ ದರ್ಶನ ಪಡೆದರು. ವಿಶೇಷ ಪೂಜೆಗಳನ್ನು ಸಲ್ಲಿಸಿದರು. ಬಳಿಕ ಅವರು ಧರ್ಮಸ್ಥಳದ ಧಮಾಧಿಕಾರಿ ಡಾ.ಡಿ ವೀರೇಂದ್ರಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಈ ಸಂದರ್ಭದಲ್ಲಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಮಾಜಿ ಪ್ರಧಾನಿಗಳು ತಾನು ಪುಣ್ಯಕ್ಷೇತ್ರಗಳ ದರ್ಶನ ಪಡೆಯುತ್ತಿದ್ದೇನೆ, ಇದೀಗ ಶೃಂಗೇರಿಯಿಂದ ಇಲ್ಲಿಗೆ ಬಂದಿದ್ದೇನೆ, ಇಲ್ಲಿಂದ ಬೆಂಗಳೂರಿಗೆ ತೆರಳುವುದಾಗಿ ತಿಳಿಸಿದರು. ರಾಜಕೀಯ ವಿಚಾರಗಳ ಬಗೆಗಿನ ಪ್ರಶ್ನೆಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದ ಅವರು ಇಲ್ಲಿ ಯಾವುದೇ ರಾಜಕೀಯ ಮಾತನಾಡುವುದಿಲ್ಲ ಎಂದು ತಿಳಿಸಿದರು. 

ಮಾಜಿ ಪ್ರಧಾನಿಯವರನ್ನು ಧಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಬರಮಾಡಿ ಕೊಂಡರು. ಅವರೊಂದಿಗೆ ಜಾತ್ಯಾತೀತ ಜನತಾದಳದ ಮುಖಂಡ ಎಂ.ಬಿ ಸದಾಶಿವ ಹಾಗೂ ಇತರರು ಉಪಸ್ಥಿತರಿದ್ದರು. 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)