varthabharthi

ಕರಾವಳಿ

ದ.ಕ.ಲೋಕಸಭಾ ಕ್ಷೇತ್ರ: ಬಿಜೆಪಿ ಅಭ್ಯರ್ಥಿ ನಳಿನ್‌ಗೆ ಒಂದು ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ

ವಾರ್ತಾ ಭಾರತಿ : 23 May, 2019

ಮಂಗಳೂರು, ಮೇ 23: ದ.ಕ.ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ 1 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ ಸಾಧಿಸಿದ್ದಾರೆ.

ಮೊದಲ ಸುತ್ತಿನಲ್ಲೇ ನಳಿನ್ ಮುನ್ನಡೆ ಸಾಧಿಸಿಕೊಂಡು ಬಂದಿದ್ದು, ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆರಂಭಿಸಿದ್ದಾರೆ.

ಫಲಿತಾಂಶ ಪ್ರಕಟನೆಗೆ ಮುನ್ನವೇ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿತಿಂಡಿ ಹಂಚಿ ಸಂಭ್ರಮಿಸುತ್ತಿ ದ್ದಾರೆ. ಸುರತ್ಕಲ್ ಎನ್‌ಐಟಿಕೆ ಮತ ಎಣಿಕೆ ಕೇಂದ್ರದ ಸಮೀಪ ಹಾಗೂ ಪಕ್ಷದ ಕಚೇರಿ ಮುಂದೆ ಕಾರ್ಯಕರ್ತರು ಸಂಭ್ರಮ ಆಚರಿಸುತ್ತಿದ್ದರೆ, ಇತ್ತ ಭಾರೀ ನಿರೀಕ್ಷೆ ಹೊಂದಿದ್ದ ಕಾಂಗ್ರೆಸ್ ಕಾರ್ಯಕರ್ತರಲ್ಲಿ ನಿರಾಶೆ ಎದ್ದು ಕಾಣುತ್ತಿವೆ.

ನಳಿನ್ ಕುಮಾರ್ ಕಟೀಲ್ 2,84,320 ಮತಗಳನ್ನು ಪಡೆದರೆ, ಅವರ ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ 1,76,216 ಮತ ಪಡೆದಿದ್ದಾರೆ.

ಎಸ್‌ಡಿಪಿಐ ಅಭ್ಯರ್ಥಿ ಇಲ್ಯಾಸ್ ಮುಹಮ್ಮದ್ ತುಂಬೆ 15,955 ಮತಗಳನ್ನು ಪಡೆದಿದ್ದಾರೆ. ಒಟ್ಟು 4,85,207 ಮತಗಳ ಎಣಿಕೆಯಾಗಿದೆ. 2,751 ನೋಟ ಮತಗಳು ಚಲಾವಣೆಯಾಗಿವೆ. ನಳಿನ್ ಕುಮಾರ್ ಕಟೀಲ್ 1,08,104 ಮತಗಳ ಮುನ್ನಡೆ ಸಾಧಿಸಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)