varthabharthi

ಕರ್ನಾಟಕ

ಸೊರಬ ಪ.ಪಂ., ನೆಲಮಂಗಲ ಪುರಸಭೆಗೆ ಜೂ.1ಕ್ಕೆ ಚುನಾವಣೆ: ರಜೆ ಘೋಷಣೆ

ವಾರ್ತಾ ಭಾರತಿ : 24 May, 2019

ಬೆಂಗಳೂರು, ಮೇ 24: ಶಿವಮೊಗ್ಗ ಜಿಲ್ಲೆಯ ಸೊರಬ ಪಟ್ಟಣ ಪಂಚಾಯತ್ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಪುರಸಭೆಗೆ ಜೂನ್ 1 ರಂದು ಸಾರ್ವತ್ರಿಕ ಚುನಾವಣೆ ನಡೆಯಲಿದೆ. ಮತದಾರರಿಗೆ ಮತದಾನ ಮಾಡಲು ಅವಕಾಶವಾಗುವಂತೆ, ಸಾರ್ವತ್ರಿಕ ಚುನಾವಣೆ ನಡೆಯುವ ನಗರ ಪ್ರದೇಶಗಳ ವ್ಯಾಪ್ತಿಯಲ್ಲಿರುವ ಎಲ್ಲ ರಾಜ್ಯ ಸರಕಾರಿ ಕಚೇರಿಗಳು, ಶಾಲಾ-ಕಾಲೇಜುಗಳು (ಅನುದಾನಿತ ಶಿಕ್ಷಣ ಸಂಸ್ಥೆಗಳು ಒಳಗೊಂಡಂತೆ) ಮತ್ತು ಸರಕಾರಿ ಸ್ವಾಮ್ಯದ ಸಂಸ್ಥೆಗಳು ಸೇರಿದಂತೆ ಜೂ.1 ರಂದು ಸಾರ್ವತ್ರಿಕ ರಜೆಯನ್ನು ಘೋಷಿಸಲಾಗಿದೆ.

ಈ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ಸಾರ್ವಜನಿಕ ಉದ್ದಿಮೆಗಳು, ವ್ಯವಹಾರಿಕ ಸಂಸ್ಥೆಗಳು, ಖಾಸಗಿ ಕಂಪನಿಗಳು ಮತ್ತು ಇನ್ನಿತರ ಸಂಸ್ಥೆಗಳಲ್ಲಿ ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಸುತ್ತಿರುವ ನೌಕರರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ವೇತನ ಸಹಿತ ರಜೆ ನೀಡಲು ಈ ಮೂಲಕ ಆದೇಶಿಸಲಾಗಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)