varthabharthi

ಕರ್ನಾಟಕ

ದಾವಣಗೆರೆ: ಸಿಡಿಲು ಬಡಿದು ಇಬ್ಬರು ಯುವಕರು ಮೃತ್ಯು, ಮೂವರಿಗೆ ಗಾಯ

ವಾರ್ತಾ ಭಾರತಿ : 27 May, 2019

ದಾವಣಗೆರೆ, ಮೇ 27: ಉದ್ಯೋಗಿ ಖಾತ್ರಿ ಯೋಜನೆಯನ್ವಯ ಕೂಲಿ ಕೆಲಸ ಮಾಡುತ್ತಿದ್ದ ಇಬ್ಬರು ಯುವಕರು ಸಿಡಿಲಿನ ಆಘಾತಕ್ಕೊಳಗಾಗಿ ಮೃತಟ್ಟ ದಾರುಣ ಘಟನೆ ಬಳ್ಳಾರಿ ಜಿಲ್ಲೆಯ ಹರಪನಹಳ್ಳಿ ತಾಲೂಕಿನಲ್ಲಿ ಇಂದು ಬೆಳಗ್ಗೆ ನಡೆದಿದೆ.

ಮೃತರನ್ನು ಹರಪನಹಳ್ಳಿ ತಾಲೂಕಿನ ಚಿಗಟೇರಿ ಗ್ರಾಮದ ನಿವಾಸಿಗಳಾದ ಕಿರಣ್(17) ಹಾಗೂ ಅರವಿಂದ (19) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ.

ಹರಪನಹಳ್ಳಿ ತಾಲೂಕಿನಾದ್ಯಂತ ಇಂದು ಬೆಳಗ್ಗೆಯಿಂದ ಗುಡುಗು ಸಿಡಿಲು ಸಹಿತ ಭಾರೀ ಮಳೆಯಾಗಿದೆ. ಈ ವೇಳೆ ಚಿಗಟೇರಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಂತೆ ಕೂಲಿ ಮಾಡುತ್ತಿದ್ದ ಸ್ಥಳಕ್ಕೆ ಸಿಡಿಲು ಬಡಿದಿದೆ. ಇದರಿಂದ ಕಿರಣ್ ಮತ್ತು ಅರವಿಂದ್ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಇತರ ಮೂವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹರಪನಹಳ್ಳಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ಬಗ್ಗೆ ಚಿಗಟೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)