varthabharthi

ರಾಷ್ಟ್ರೀಯ

ಈ ಬಾರಿ ಅಂಕಗಣಿತವನ್ನು ರಸಾಯನಶಾಸ್ತ್ರ ಮಣಿಸಿದೆ: ಪ್ರಧಾನಿ ಮೋದಿ

ವಾರ್ತಾ ಭಾರತಿ : 27 May, 2019

ವಾರಣಾಸಿ, ಮೇ27: ಈ ಬಾರಿಯ ಚುನಾವಣೆಯಲ್ಲಿ ಅಂಕಗಣಿತವನ್ನು ರಸಾಯನ ಶಾಸ್ತ್ರ ಮಣಿಸಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

ತಮ್ಮನ್ನು ಎರಡನೇ ಬಾರಿ ಲೋಕಸಭೆಗೆ  ಆಯ್ಕೆ ಮಾಡಿರುವ  ವಾರಣಾಸಿ ಕ್ಷೇತ್ರಕ್ಕೆ  ಭೇಟಿ ನೀಡಿದ ಮೋದಿ ಅವರು ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು. ಬಳಿಕ ತಮ್ಮನ್ನು ಗೆಲ್ಲಿಸಿದ ಮತದಾರರಿಗೆ ಕೃತಜ್ಞತೆ ಸಲ್ಲಿಸಿದರು.

ಮೇ30 ರಂದು ಪ್ರಧಾನಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದ್ದು, ಅದಕ್ಕೂ ಮೊದಲು ಕ್ಷೇತ್ರಕ್ಕೆ ಆಗಮಿಸಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)