varthabharthi

ಕ್ರೀಡೆ

ವಿಶ್ವಕಪ್: ಆಸ್ಟ್ರೇಲಿಯ ವಿರುದ್ಧ ಭಾರತ 352/5

ವಾರ್ತಾ ಭಾರತಿ : 9 Jun, 2019

ಲಂಡನ್, ಜೂ.9: ಶಿಖರ್ ಧವನ್ ಶತಕ(117), ವಿರಾಟ್ ಕೊಹ್ಲಿ(82)ಹಾಗೂ ರೋಹಿತ್ ಶರ್ಮಾ(57) ಗಳಿಸಿದ ಅರ್ಧಶತಕದ ಸಹಾಯದಿಂದ ಭಾರತ ತಂಡ ಆಸ್ಟ್ರೇಲಿಯ ವಿರುದ್ಧ ರವಿವಾರ ನಡೆದ ವಿಶ್ವಕಪ್‌ನ 14ನೇ ಪಂದ್ಯದಲ್ಲಿ ನಿಗದಿತ 50 ಓವರ್‌ಗಳಲ್ಲಿ 5 ವಿಕೆಟ್‌ಗಳ ನಷ್ಟಕ್ಕೆ 352 ರನ್ ಗಳಿಸಿದೆ.

ಇನಿಂಗ್ಸ್ ಆರಂಭಿಸಿದ ರೋಹಿತ್ ಹಾಗೂ ಧವನ್ ಮೊದಲ ವಿಕೆಟ್‌ಗೆ 127 ರನ್ ಜೊತೆಯಾಟ ನಡೆಸಿ ಉತ್ತಮ ಆರಂಭ ಒದಗಿಸಿದರು. ನಾಯಕ ಕೊಹ್ಲಿ, ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ(48) ಹಾಗೂ ಎಂಎಸ್ ಧೋನಿ(27) ಎರಡಂಕೆಯ ಸ್ಕೋರ್ ಗಳಿಸಿದರು.

ಆಸೀಸ್ ಪರ ಸ್ಟೋನಿಸ್(2-62) ಯಶಸ್ವಿ ಬೌಲರ್ ಎನಿಸಿಕೊಂಡರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)