varthabharthi

ಬೆಂಗಳೂರು

ಗಿರೀಶ್ ಕಾರ್ನಾಡ್ ನಿಧನ: ಸಚಿವ ಸಂಪುಟ ವಿಸ್ತರಣೆ ಜೂ.14ಕ್ಕೆ

ವಾರ್ತಾ ಭಾರತಿ : 10 Jun, 2019

ಬೆಂಗಳೂರು, ಜೂ. 10: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ, ರಂಗಭೂಮಿ ಕಲಾವಿದ, ನಟ, ನಿರ್ದೇಶಕ ಗಿರೀಶ್ ಕಾರ್ನಾಡ್ ನಿಧನದ ಹಿನ್ನೆಲೆಯಲ್ಲಿ ಜೂ.12ಕ್ಕೆ ನಿಗದಿಯಾಗಿದ್ದ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಜೂ.14ಕ್ಕೆ ಮರು ನಿಗದಿ ಮಾಡಲಾಗಿದೆ.

ಕಾರ್ನಾಡ್ ನಿಧನದ ಹಿನ್ನೆಲೆಯಲ್ಲಿ ಮೃತರ ಗೌರವಾರ್ಥ ರಾಜ್ಯ ಸರಕಾರ ಮೂರು ದಿನ ಶೋಕಾಚರಣೆ ಘೋಷಣೆ ಮಾಡಿದೆ. ಹೀಗಾಗಿ ಜೂ. 12ಕ್ಕೆ ಗೊತ್ತು ಮಾಡಿದ್ದ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಜೂ.14ರ ಮಧ್ಯಾಹ್ನ 1ಗಂಟೆಗೆ ರಾಜಭವನದಲ್ಲಿ ನಡೆಯಲಿದೆ ಎಂದು ಸಿಎಂ ಕಚೇರಿ ಪ್ರಕಟಣೆ ತಿಳಿಸಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)