varthabharthi

ಕರಾವಳಿ

ಸ್ಕೂಟರ್ ಢಿಕ್ಕಿ: ಪಾದಚಾರಿ ಮಹಿಳೆಗೆ ಗಾಯ

ವಾರ್ತಾ ಭಾರತಿ : 11 Jun, 2019

ಪಡುಬಿದ್ರಿ:  ಸ್ಕೂಟರ್ ಢಿಕ್ಕಿ ಹೊಡೆದು ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ  ಮಹಿಳೆಯೋರ್ವರು ಗಂಭೀರವಾಗಿ ಗಾಯಗೊಂಡ ಘಟನೆ ಪಡುಬಿದ್ರೆ ಠಾಣೆ ವ್ಯಾಪ್ತಿಯ ತೆಂಕ ಎರ್ಮಾಳು ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಸಂಭವಿಸಿದೆ.

ಎರ್ಮಾಳು ಪೂಂದಾಡು ನಿವಾಸಿ ಜಯಂತಿ (51) ಎಂಬವರು ಗಾಯಗೊಂಡವರಾಗಿದ್ದು, ರಾಷ್ಟ್ರೀಯ ಹೆದ್ದಾರಿ 66 ರ ರಸ್ತೆ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಉಡುಪಿ ಕಡೆಯಿಂದ ಮಂಗಳೂರಿನತ್ತ ಸವಾರಿ ಮಾಡಿಕೊಂಡು ಹೋಗುತ್ತಿದ್ದ ಸ್ಕೂಟರ್ ಸವಾರ ಢಿಕ್ಕಿ ಹೊಡೆದ ಪರಿಣಾಮ ಜಯಂತಿಯವರು ರಸ್ತೆಗೆಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಸ್ಥಳೀಯರು ಚಿಕಿತ್ಸೆಗಾಗಿ ಕೂಡಲೇ ಪಡುಬಿದ್ರಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ಬಳಿಕ ಹೆಚ್ಚಿನ ಚಿಕಿತ್ಸೆಗೆ ಉಡುಪಿಯ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ.

ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)