varthabharthi

ಕರ್ನಾಟಕ

ವಿಚಾರವಂತರ ಹೆಸರಿನಲ್ಲಿ ಸ್ಮಾರಕಗಳು ನಿರ್ಮಾಣವಾಗಲಿ: ಮಲ್ಲಿಕಾರ್ಜುನ ಖರ್ಗೆ

ವಾರ್ತಾ ಭಾರತಿ : 11 Jun, 2019

ಕಲಬುರ್ಗಿ, ಜೂ.11: ಅಂತರ್‌ರಾಷ್ಟ್ರೀಯ ಮಟ್ಟದ ನಾಟಕಕಾರ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಗಿರೀಶ್ ಕಾರ್ನಾಡ್ ಅಗಲಿಕೆಯಿಂದ ಪ್ರಗತಿಪರ ವಿಚಾರಗಳಿಗೆ ಕೊಡಲಿಪೆಟ್ಟು ಬಿದ್ದಂತಾಗಿದೆ. ಇಂತಹ ವಿಚಾರವಂತರ ಹೆಸರಿನಲ್ಲಿ ಸ್ಮಾರಕಗಳು ನಿರ್ಮಾಣವಾಗಬೇಕೆಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.

ಗಿರೀಶ್ ಕಾರ್ನಾಡ್ ನಿಧನಕ್ಕೆ ಸಂತಾಪ ಸೂಚಿಸಿ ಮಾತನಾಡಿದ ಅವರು, ಸಾಹಿತ್ಯ, ಸಿನೆಮಾ, ರಂಗಭೂಮಿ ಹಾಗೂ ಪ್ರಗತಿಪರ ಚಳವಳಿಗೆ ಗಿರೀಶ್‌ ಕಾರ್ನಾಡ್‌ರ ಕೊಡುಗೆ ಅಪಾರವಾಗಿದೆ. ಇವರ ಹೆಸರಿನಲ್ಲಿ ಸ್ಮಾರಕ ನಿರ್ಮಿಸುವ ಮೂಲಕ ಮಾನವೀಯ ಮೌಲ್ಯಗಳ್ಳುಳ್ಳ ಚಿಂತನೆಗಳನ್ನು ಜೀವಂತವಾಗಿಡಬೇಕಾಗಿದೆ ಎಂದರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)