varthabharthi

ಬೆಂಗಳೂರು

ಸುಬ್ಬಯ್ಯ ಶೆಟ್ಟಿಗೆ ಶಾಂತವೇರಿ ಗೋಪಾಲಗೌಡ ಪ್ರಶಸ್ತಿ

ವಾರ್ತಾ ಭಾರತಿ : 11 Jun, 2019

ಬೆಂಗಳೂರು, ಜೂ.11: ಜನಶಕ್ತಿ ಕೇಂದ್ರದ ವತಿಯಿಂದ ನೀಡುವ ಶಾಂತವೇರಿ ಗೋಪಾಲಗೌಡ ಪ್ರಶಸ್ತಿಯನ್ನು ಮಂಗಳೂರಿನ ಸರಳ, ಸಜ್ಜನ ರಾಜಕಾರಣಿ ಬಿ.ಸುಬ್ಬಯ್ಯ ಶೆಟ್ಟಿ ಅವರಿಗೆ 2019 ನೆ ಸಾಲಿನಲ್ಲಿ ನೀಡಲಾಗುತ್ತಿದೆ.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರದ ಅಧ್ಯಕ್ಷ ಸಿ.ಕೆ ರಾಮೇಗೌಡ, ಕನ್ನಡ ಜನಶಕ್ತಿ ಕೇಂದ್ರವು ಜೂ.25 ರಂದು ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಪ್ರಶಸ್ತಿಯು 25 ಸಾವಿರ ನಗದು ಹಾಗೂ ಕಂಚಿನ ಫಲಕ ನೀಡಿ ಗೌರವಿಸಲಾಗುವುದು ಎಂದು ತಿಳಿಸಿದರು.

ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಸಾಹಿತಿ ಡಾ. ಇಂದಿರಾ ಹೆಗ್ಗಡೆ ಅವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಹಿರಿಯ ಪತ್ರಕರ್ತ ರಾಜಶೈಲೇಶಚಂದ್ರ ಗುಪ್ತ ಅವರು ಭಾಗವಹಿಸಲಿದ್ದಾರೆ ಎಂದು ಹೇಳಿದರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)