ನೇಣು ಬಿಗಿದು ಯುವಕ ಆತ್ಮಹತ್ಯೆ
ಮಂಡ್ಯ, ಜೂ.11: ಶ್ರೀರಂಗಪಟ್ಟಣ ತಾಲೂಕಿನ ಗಂಜಾಂ ಗ್ರಾಮದ ಬಳಿ ಯುವಕನೊಬ್ಬ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮೈಸೂರಿನ ರಮ್ಮನಹಳ್ಳಿಯ ಗಣೇಶ್(24) ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ಅಜ್ಜಿ ಮನೆಗೆ ಬಂದು ಮನೆಯ ಸಮೀಪದ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಶ್ರೀರಂಗಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
Next Story