varthabharthi

ಕರ್ನಾಟಕ

ಒಂದೇ ಕಂತಿನಲ್ಲಿ ಬಾಕಿ ಮೊತ್ತ ಬಿಡುಗಡೆಗೆ ಆದೇಶ

ವಾಣಿಜ್ಯ ಬ್ಯಾಂಕುಗಳ ಬೆಳೆಸಾಲ ಮನ್ನಾ: ಸರಕಾರದ ಮಹತ್ವದ ನಿರ್ಧಾರ

ವಾರ್ತಾ ಭಾರತಿ : 12 Jun, 2019

ಬೆಂಗಳೂರು, ಜೂ. 12: ವಾಣಿಜ್ಯ ಬ್ಯಾಂಕುಗಳ ಬೆಳೆ ಸಾಲಮನ್ನಾಗೆ ಸಂಬಂಧಿಸಿದಂತೆ ರಾಜ್ಯ ಸರಕಾರ ಮಹತ್ವದ ತೀರ್ಮಾನ ಕೈಗೊಂಡಿದ್ದು, ಅರ್ಹತೆ ಹೊಂದಿರುವ ಫಲಾನುಭವಿಗಳಿಗೆ ಬಾಕಿ ಉಳಿದಿರುವ ಸಾಲವನ್ನು ಒಂದೇ ಕಂತಿನಲ್ಲಿ ಬಿಡುಗಡೆ ಮಾಡಲು ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ರೈತರು ವಾಣಿಜ್ಯ ಬ್ಯಾಂಕುಗಳಿಂದ ಪಡೆದಿರುವ ಬೆಳೆಸಾಲ ಮನ್ನಾ ಯೋಜನೆಗೆ ಸಂಬಂಧಿಸಿದಂತೆ ಅರ್ಹತೆ ಹೊಂದಿರುವವರಿಗೆ ಸಂಪೂರ್ಣ ಮೊತ್ತವನ್ನು ಒಂದೇ ಕಂತಿನಲ್ಲಿ ರೈತರ ಖಾತೆಗೆ ಬಿಡುಗಡೆ ಮಾಡಲು ಅನುಮೋದನೆ ನೀಡಿ ಸರಕಾರ ಆದೇಶ ಹೊರಡಿಸಿದೆ.

ರಿಸ್ಟ್ರಕ್ಚರ್ಡ್ ಸಾಲಗಳು, ಅರ್ಹತೆ ಹೊಂದಿರುವ ಓವರ್ ಡ್ಯೂ ಸಾಲಗಳು ಹಾಗೂ ಪ್ರೋತ್ಸಾಹ ಧನಕ್ಕೆ ಅರ್ಹತೆ ಹೊಂದಿರುವ ಸಾಲಗಳಿಗೆ ಸಂಬಂಧಿಸಿದಂತೆ ಈಗಾಗಲೇ ಬಿಡುಗಡೆಯಾದ ಮೊತ್ತವನ್ನು ಕಡಿತಗೊಳಿಸಿದೆ. ಎನ್ಪಿಎ ಸಾಲಗಳು ಮತ್ತು 2018ರ ಜ.1ರಿಂದ ಬಡ್ಡಿ ಮೊತ್ತ ಪಾವತಿಸುವ ಬಗ್ಗೆ ಪ್ರತ್ಯೇಕ ನಿರ್ಧಾರ ಕೈಗೊಳ್ಳಲಾಗುವುದು ಎಂದು ಈ ಆದೇಶ ತಿಳಿಸಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)