varthabharthi

ರಾಷ್ಟ್ರೀಯ

ರಾಯ್‌ಬರೇಲಿಗೆ ಸೋನಿಯಾ ಗಾಂಧಿ ಭೇಟಿ, ಪ್ರಿಯಾಂಕಾ ಸಾಥ್

ವಾರ್ತಾ ಭಾರತಿ : 12 Jun, 2019

ಹೊಸದಿಲ್ಲಿ, ಜೂ.12: ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ಬಳಿಕ ಮೊದಲ ಬಾರಿ ತಾನು ಮರು ಆಯ್ಕೆಯಾಗಿರುವ ಉತ್ತರಪ್ರದೇಶದ ರಾಯ್‌ಬರೇಲಿ ಕ್ಷೇತ್ರಕ್ಕೆ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಬುಧವಾರ ಭೇಟಿ ನೀಡಿದರು. ಸೋನಿಯಾರ ಜೊತೆ ಅವರ ಪುತ್ರಿ ಹಾಗೂ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರಿದ್ದರು.

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಉತ್ತರಪ್ರದೇಶದಲ್ಲಿ ರಾಯ್‌ಬರೇಲಿಯಲ್ಲಿ ಮಾತ್ರ ಗೆಲುವು ಸಾಧಿಸಿದೆ. ತನ್ನ ಸಾಂಪ್ರದಾಯಿಕ ಭದ್ರಕೋಟೆ ಅಮೇಠಿಯಲ್ಲಿ ಸೋಲುಂಡಿದೆ. ಈ ಕ್ಷೇತ್ರದಲ್ಲಿ ಬಿಜೆಪಿಯ ಸ್ಮತಿ ಇರಾನಿ ಗೆಲುವು ಸಾಧಿಸಿದ್ದರು. ರಾಯ್‌ಬರೇಲಿಯಲ್ಲಿ ಸೋನಿಯಾ ಗಾಂಧಿ ಬಿಜೆಪಿಯ ದಿನೇಶ್ ಪ್ರತಾಪ್ ಸಿಂಗ್ ವಿರುದ್ಧ 1.6 ಲಕ್ಷ ಅಂತರ ಮತಗಳಿಂದ ಜಯ ಸಾಧಿಸಿದ್ದರು.

ಭೇಟಿಯ ವೇಳೆ ಸೋನಿಯಾ ಗಾಂಧಿ ಚುನಾವಣೆಯಲ್ಲಿ ಪಕ್ಷದ ನಿರ್ವಹಣೆ ಹಾಗೂ 2022ರಲ್ಲಿ ನಡೆಯುವ ರಾಜ್ಯ ವಿಧಾನಸಭಾ ಚುನಾವಣೆಯ ರಣತಂತ್ರದ ಬಗ್ಗೆ ಪರಾಮರ್ಶಿಸಿದರು. ಕಾಂಗ್ರೆಸ್ ಪಕ್ಷಕ್ಕೆ ಗೆಲುವು ತಂದುಕೊಡಲು ಶ್ರಮಿಸಿದ ರಾಯ್‌ಬರೇಲಿಯ ಬೂತ್‌ಮಟ್ಟದ ಕಾರ್ಯಕರ್ತರು ಹಾಗೂ ಮತದಾರರನ್ನು ವೈಯಕ್ತಿಕವಾಗಿ ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)