varthabharthi

ರಾಷ್ಟ್ರೀಯ

ಕೋಲ್ಕತಾ: ಪೊಲೀಸರು-ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ವಾರ್ತಾ ಭಾರತಿ : 12 Jun, 2019

ಕೋಲ್ಕತಾ, ಜೂ.12: ನಗರದ ಹೃದಯಭಾಗದಲ್ಲಿರುವ ರಾಜ್ಯ ಪೊಲೀಸ್ ಪ್ರಧಾನ ಕಚೇರಿಯಿರುವ ಲಾಲ್‌ಬಝಾರ್‌ನತ್ತ ಪ್ರತಿಭಟನಾ ರ್ಯಾಲಿ ನಡೆಸಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರು ಪೊಲೀಸರೊಂದಿಗೆ ಘರ್ಷಣೆ ನಡೆಸಿದ ಘಟನೆ ಬುಧವಾರ ನಡೆದಿದೆ.

ಪೊಲೀಸರು ರ್ಯಾಲಿಯನ್ನು ನಿಲ್ಲಿಸುವಂತೆ ಹಲವು ಬಾರಿ ಮನವಿ ಮಾಡಿದ ಹೊರತಾಗಿಯೂ ಮುನ್ನುಗ್ಗಿ ಬಂದ ನೂರಾರು ಕಾರ್ಯಕರ್ತರ ಮೇಲೆ ಲಾಠಿಚಾರ್ಜ್ ನಡೆಸಿ, ಜಲಫಿರಂಗಿ ಪ್ರಯೋಗಿಸಿದರು. ಕೆಲವು ಕಾರ್ಯಕರ್ತರು ಘೋಷಣೆ ಕೂಗುತ್ತಾ, ಪೊಲೀಸರ ಮೇಲೆ ಕಲ್ಲು ಹಾಗೂ ಬಾಟಲಿ ತೂರಾಟ ನಡೆಸಿದರು.

ಶನಿವಾರ ಬಾಶಿರ್‌ಹಟ್‌ನಲ್ಲಿ ಇಬ್ಬರು ಬಿಜೆಪಿ ಕಾರ್ಯಕರ್ತರ ಕೊಲೆಯನ್ನು ಖಂಡಿಸಿ ರ್ಯಾಲಿ ಹಮ್ಮಿಕೊಳ್ಳಲಾಗಿತ್ತು. ಕಳೆದ ಕೆಲವು ಸಮಯದಿಂದ ನಮ್ಮ ಪಕ್ಷಕ್ಕೆ ಸೇರಿರುವ ಕಾರ್ಯಕರ್ತರನ್ನು ಕೊಲೆ ಮಾಡಲಾಗಿದೆ ಎಂದು ಬಿಜೆಪಿ ಆರೋಪಿಸಿದೆ.

ಇಂದಿನ ರ್ಯಾಲಿ ಬಿಜೆಪಿ ಹಾಗೂ ಮಮತಾ ಬ್ಯಾನರ್ಜಿ ನೇತೃತ್ವದ ಸರಕಾರದ ಹೊಸ ಶಕ್ತಿಪ್ರದರ್ಶನವಾಗಿದ್ದು, ಬಿಜೆಪಿ ಕಾರ್ಯಕರ್ತರು ತಡೆಬೇಲಿಯನ್ನು ಮುರಿದು ಒಳಬರುವ ಸಾಧ್ಯತೆಯನ್ನು ವಿಫಲಗೊಳಿಸಲು ಬೆಳಗ್ಗೆಯಿಂದಲೇ ಉತ್ತಮ ವ್ಯವಸ್ಥೆ ಮಾಡಲಾಗಿತ್ತು

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)