varthabharthi

ಕರಾವಳಿ

ಪದುವಾ ಕಾಲೇಜಿನಲ್ಲಿ ಉದ್ಯೋಗ ಮೇಳ

ವಾರ್ತಾ ಭಾರತಿ : 12 Jun, 2019

ಮಂಗಳೂರು, ಜೂ.12: ದ.ಕ. ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಮಂಗಳೂರು, ಯುವ ಉದ್ಯೋಗಾಂಕ್ಷಿಗಳ ಸೇವಾ ಕೇಂದ್ರ ಹಾಗೂ ಪದುವಾ ಕಾಲೇಜು ಆಫ್ ಕಾಮರ್ಸ್ ಆ್ಯಂಡ್ ಮ್ಯಾನೇಜ್‌ಮೆಂಟ್ ಮಂಗಳೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಬುಧವಾರ ಪದುವಾ ಕಾಲೇಜಿನಲ್ಲಿ ಉದ್ಯೋಗ ಮೇಳವು ಜರುಗಿತು.

ಸುಮಾರು 26 ಕಂಪೆನಿಗಳು ಭಾಗವಹಿಸಿದ್ದ ಈ ಮೇಳದಲ್ಲಿ ಎಸೆಸೆಲ್ಸಿ, ಪಿಯುಸಿ, ಐಟಿಐ, ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಐನೂರಕ್ಕೂ ಅಧಿಕ ಉದ್ಯೋಗ ಆಕಾಂಕ್ಷಿಗಳು ಪಾಲ್ಗೊಂಡಿದ್ದರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)