varthabharthi

ರಾಷ್ಟ್ರೀಯ

ರಾಜ್ಯಸಭೆ ಉಪಾಧ್ಯಕ್ಷರಾಗಿ ಪಿಯೂಷ್ ಗೋಯಲ್ ನೇಮಕ

ವಾರ್ತಾ ಭಾರತಿ : 12 Jun, 2019

ಹೊಸದಿಲ್ಲಿ, ಜೂ. 12: ರಾಜ್ಯ ಸಭೆಯ ಉಪಾಧ್ಯಕ್ಷರಾಗಿ ಕೇಂದ್ರ ಸಚಿವ ಪಿಯೂಷ್ ಗೋಯಲ್ ಬುಧವಾರ ನಿಯೋಜಿತರಾಗಿದ್ದಾರೆ. ಎರಡು ಬಾರಿ ರಾಜ್ಯಸಭೆಯ ಸಂಸದರಾಗಿದ್ದ ಪೀಯೂಷ್ ಗೋಯಲ್ ಲೋಕಸಭೆಗೆ ಆಯ್ಕೆಯಾಗಿರುವ ರವಿಶಂಕರ್ ಪ್ರಸಾದ್ ಅವರ ಉತ್ತರಾಧಿಕಾರಿಯಾಗಿ ಕಾರ್ಯ ನಿರ್ವಹಿಸಲಿದ್ದಾರೆ.

ಪಿಯೂಷ್ ಗೋಯಲ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಸರಕಾರದಲ್ಲಿ ರೈಲ್ವೆ, ವಾಣಿಜ್ಯ ಹಾಗೂ ಉದ್ಯಮ ಖಾತೆಯ ಸಚಿವರಾಗಿದ್ದಾರೆ. ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಖಾತೆ ಸಚಿವರಾಗಿರುವ ಬಿಜೆಪಿ ನಾಯಕ ತಾವರ್‌ಚಂದ್ ಗೆಹ್ಲೋಟ್ ಅವರು ಮಂಗಳವಾರ ರಾಜ್ಯ ಸಭೆಯ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.

ಗೋಯಲ್ ಪ್ರಸ್ತುತ ಮಹಾರಾಷ್ಟ್ರದ ರಾಜ್ಯಸಭಾ ಸದಸ್ಯ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)