varthabharthi

ಕರಾವಳಿ

ಜೂ.14ರಂದು ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ವಾರ್ತಾ ಭಾರತಿ : 12 Jun, 2019

ಉಡುಪಿ, ಜೂ.12: ಜಿಲ್ಲಾಡಳಿತ ಉಡುಪಿ, ಜಿಪಂ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ ಉಡುಪಿ, ಟ್ರಿನಿಟಿ ಕೈಗಾರಿಕಾ ತರಬೇತಿ ಕೇಂದ್ರ, ಜ್ಞಾನ ಸಾಧನಾ ಉದ್ಯಾವರ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ರಕ್ತದಾನಿಗಳ ದಿನಾಚರಣೆ ಪ್ರಯುಕ್ತ ಬೃಹತ್ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಹಾಗೂ ಅತಿ ಹೆಚ್ಚು ಬಾರಿ ರಕ್ತದಾನ ಮಾಡಿರುವ ದಾನಿಗಳಿಗೆ ಸನ್ಮಾನ ಕಾರ್ಯಕ್ರಮವು ಜೂ.14ರಂದು ಬೆಳಗ್ಗೆ 10 ಗಂಟೆಗೆ ಉದ್ಯಾವರ ಜ್ಞಾನಸಾಧನಾ ಟ್ರಿನಿಟಿ ಕೈಗಾರಿಕಾ ತರಬೇತಿ ಕೇಂದ್ರದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಉದ್ಘಾಟಿ ಸಲಿದ್ದು, ಉದ್ಯಾವರ ಜ್ಞಾನ ಸಾಧನಾ ಟ್ರಿನಿಟಿ ಕೈಗಾರಿಕಾ ತರಬೇತಿ ಕೇಂದ್ರದ ಪ್ರಾಂಶುಪಾಲ ಜೋನ್ ಎಂ.ಡಿಸೋಜಾ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)