varthabharthi

ಕರಾವಳಿ

ಮಕ್ಕಳ ರಕ್ಷಣಾಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ

ವಾರ್ತಾ ಭಾರತಿ : 12 Jun, 2019

ಉಡುಪಿ, ಜೂ.12: ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಉಡುಪಿ ಕಚೇರಿಯಲ್ಲಿ ಖಾಲಿ ಇರುವ ಮಕ್ಕಳ ರಕ್ಷಣಾಧಿಕಾರಿ ಹುದ್ದೆಯನ್ನು ಹೊರಗುತ್ತಿಗೆ ಆಧಾರದ ವೆುೀಲೆ ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ.

ವಿದ್ಯಾರ್ಹತೆ ಮತ್ತು ಅನುಭವ: ಎಂಎಸ್‌ಡಬ್ಲ್ಯೂ/ ಸೋಶಿಯೋಲಾಜಿ/ ಮನಃಶಾಸ್ತ್ರ/ಸಮುದಾಯ ಅಭಿವೃದ್ದಿ, ಮಹಿಳಾ ಅಧ್ಯಯನ, ಗೃಹ ವಿಜ್ಞಾನ ಮತ್ತು ಮಕ್ಕಳ ಕ್ಷೇತ್ರದಲ್ಲಿ ಕನಿಷ್ಠ ಮೂರು ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿರಬೇಕು. ಕನ್ನಡ ಮತ್ತು ಇಂಗ್ಲೀಷ್ ಭಾಷೆಯಲ್ಲಿ ಉತ್ತಮ ಹಿಡಿತ ಹಾಗೂ ಕಂಪ್ಯೂಟರ್ ಜ್ಞಾನ ಹೊಂದಿರಬೇಕು. 25ವರ್ಷ ಮೇಲ್ಪಟ್ಟವರು ಅರ್ಜಿ ಸಲ್ಲಿಸಬಹುದಾಗಿದೆ. ಜೂ.13ರಿಂದ ಕಚೇರಿ ವೇಳೆಯಲ್ಲಿ ಅರ್ಜಿ ಪಡೆಯಬಹುದು.

ಅರ್ಜಿಯೊಂದಿಗೆ ಬಯೋಡಾಟ, ಎಲ್ಲಾ ಅಂಕಪಟ್ಟಿಯ ಪ್ರತಿ, ಅನುಭವದ ಪ್ರಮಾಣ ಪತ್ರ ಹಾಗೂ ಇತರೆ ಪ್ರಮಾಣ ಪತ್ರದೊಂದಿಗೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ರಜತಾದ್ರಿ, ಮಣಿಪಾಲ ಇವರಿಗೆ ಜೂ.27ರೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ:0820-2574964ನ್ನು ಸಂಪರ್ಕಿಸುವಂತೆ ಜಿಲ್ಲಾ ಸಮಗ್ರ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)