varthabharthi

ಕರ್ನಾಟಕ

ಜಿಂದಾಲ್ ಭೂಮಿ ವಾಪಸ್: ಸರಕಾರದ ತೀರ್ಮಾನಕ್ಕೆ ಎಚ್.ಕೆ.ಪಾಟೀಲ್ ಸ್ವಾಗತ

ವಾರ್ತಾ ಭಾರತಿ : 12 Jun, 2019

ಬೆಂಗಳೂರು, ಜೂ. 12: ಬಳ್ಳಾರಿಯ ಜಿಂದಾಲ್ ಕಂಪೆನಿಗೆ ಮಾರಾಟ ಮಾಡಿರುವ ಭೂಮಿಯನ್ನು ಹಿಂಪಡೆಯಲು ರಾಜ್ಯ ಸರಕಾರ ತೀರ್ಮಾನಿಸಿರುವ ಕ್ರಮ ಸ್ವಾಗತಾರ್ಹ ಎಂದು ಮಾಜಿ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ.

ಜಿಂದಾಲ್ ಕಂಪೆನಿಗೆ ಸರಕಾರಿ ಭೂಮಿ ಮಾರಾಟ ಕುರಿತು ಮರುಪರಿಶೀಲನೆ ಮಾಡುವ ಮುಖ್ಯಮಂತ್ರಿ ಕುಮಾರಸ್ವಾಮಿಯವರ ನಿರ್ಣಯ ಸ್ವಾಗತಾರ್ಹ. ಆ ಕಾರಣಕ್ಕಾಗಿ ಸಿಎಂ ಕುಮಾರಸ್ವಾಮಿ, ಡಿಸಿಎಂ ಡಾ.ಜಿ.ಪರಮೇಶ್ವರ್, ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಭೈರೇಗೌಡ ಅವರನ್ನು ಅಭಿನಂದಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)