varthabharthi

ಕರ್ನಾಟಕ

ಮಲೆ ಮಹದೇಶ್ವರ ಬೆಟ್ಟಕ್ಕೆ ಚಾಮರಾಜನಗರ ಎಸ್ಪಿ ಹೆಚ್.ಡಿ.ಆನಂದ್ ಕುಮಾರ್ ಭೇಟಿ

ವಾರ್ತಾ ಭಾರತಿ : 13 Jun, 2019

ಹನೂರು: ನೂತನ ಚಾಮರಾಜನಗರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ಹೆಚ್.ಡಿ.ಆನಂದ್ ಕುಮಾರ್ ಅವರು ಅಧಿಕಾರ ಸ್ವೀಕರಿಸುವ ಮುನ್ನ ತಾಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟಕ್ಕೆ ಬುಧವಾರ ಮುಂಜಾನೆ ಭೇಟಿ ನೀಡಿದರು. ಈ ವೇಳೆ ಕೊಳ್ಳೇಗಾಲ ಡಿವೈಎಸ್ ಪಿ ಪುಟ್ಟಮಾದಯ್ಯ, ಮಲೆ ಮಹದೇಶ್ವರ ಬೆಟ್ಟ ವೃತ್ತ ನಿರೀಕ್ಷಕ ಗೋಪಾಲಕೃಷ್ಣ  ಸೇರಿದಂತೆ ಹಲವರು ಹಾಜರಿದ್ದರು. 

ಈ ಹಿಂದೆ ಚಾಮರಾಜನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದ ಧರ್ಮೇಂದ್ರಕುಮಾರ್ ಮೀನಾ ಅವರ ಸ್ಥಾನಕ್ಕೆ ಹೆಚ್.ಡಿ.ಆನಂದ್ ಕುಮಾರ್ ಅವರನ್ನು ನೇಮಕ ಮಾಡಿದ್ದು, ಇಂದು ಅಧಿಕಾರ ಸ್ವೀಕರಿಸಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)