varthabharthi

ಕರಾವಳಿ

ಕನ್ಯಾನ: ಯುವಕನಿಗೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಅಪರಿಚಿತ ತಂಡ

ವಾರ್ತಾ ಭಾರತಿ : 16 Jun, 2019

ಮುಸ್ತಾಕ್ 

ಬಂಟ್ವಾಳ, ಜೂ. 16: ಬೈಕ್ ನಲ್ಲಿ ಬಂದ ಅಪರಿಚಿತ ತಂಡವೊಂದು ಯುವಕನೋರ್ವನಿಗೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ಕನ್ಯಾನ ಗ್ರಾಮದ ಶಿರಂಕಲ್ಲು ಎಂಬಲ್ಲಿ ರವಿವಾರ ರಾತ್ರಿ ನಡೆದಿದೆ. ಘಟನೆಯಿಂದ ಗಂಭೀರವಾಗಿ ಗಾಯಗೊಂಡ ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇಲ್ಲಿನ ಪೊಯ್ಯಗದ್ದೆ ನಿವಾಸಿ ಖಾಸಿಂ ಎಂಬವರ ಪುತ್ರ ಅಬ್ದುಲ್ ಮುಸ್ತಾಕ್ (21)  ಹಲ್ಲೆಗೊಳಗಾದ ಯುವಕ ಎಂದು ತಿಳಿದುಬಂದಿದೆ.

ಘಟನೆ ವಿವರ

ಮುಸ್ತಾಕ್ ರವಿವಾರ ರಾತ್ರಿ ಕನ್ಯಾನ ಗ್ರಾಮದ ಕೆಳಗಿನಪೇಟೆಯಿಂದ ಶಿರಂಕಲ್ಲು ಕಡೆಗೆ ನಡೆದುಕೊಂಡು ಹೋಗುತ್ತಿದ್ದು, ಈ ವೇಳೆ ಬೈಕಿನಲ್ಲಿ ಬಂದ ಅಪರಿಚಿತ ತಂಡವು ಮಾರಕಾಸ್ತ್ರಗಳಿಂದ ಹಲ್ಲೆಗೈದು ಪರಾರಿಯಾಗಿದೆ. ಘಟನೆಯಿಂದ ಮುಸ್ತಾಕ್ ಅವರ ತಲೆಗೆ ಗಂಭೀರ ಗಾಯವಾಗಿದೆ.

ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿದ್ದು, ತನಿಖೆ ನಡೆಸುತ್ತಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)