varthabharthi

ರಾಷ್ಟ್ರೀಯ

ಏಮ್ಸ್ ನಲ್ಲಿ ಕೊನೆಯುಸಿರೆಳೆದ ಅರ್ಶದ್ ಅಹ್ಮದ್ ಖಾನ್

ಉಗ್ರರ ಗುಂಡಿನ ದಾಳಿಯಲ್ಲಿ ಗಾಯಗೊಂಡಿದ್ದ ಪೊಲೀಸ್ ಅಧಿಕಾರಿ ಮೃತ್ಯು

ವಾರ್ತಾ ಭಾರತಿ : 16 Jun, 2019

ಶ್ರೀನಗರ, ಜೂ.16: ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯಲ್ಲಿ ಜೂನ್ 12ರಂದು ನಡೆದ ಉಗ್ರರ ದಾಳಿಯಲ್ಲಿ ಗಾಯಗೊಂಡಿದ್ದ ಪೊಲೀಸ್ ಅಧಿಕಾರಿ ರವಿವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಿಲ್ಲೆಯ ಸದ್ದರ್ ಪೊಲೀಸ್ ಠಾಣೆಯ ಅಧಿಕಾರಿಯಾಗಿದ್ದ ಅರ್ಶದ್ ಅಹ್ಮದ್ ಖಾನ್ ಹೊಸದಿಲ್ಲಿಯ ಏಮ್ಸ್‌ನಲ್ಲಿ ಮೃತಪಟ್ಟಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ದಕ್ಷಿಣ ಕಾಶ್ಮೀರದ ಅನಂತ್‌ನಾಗ್‌ನ ಕೆ.ಪಿ ರಸ್ತೆಯಲ್ಲಿ ಭದ್ರತಾ ಸಿಬ್ಬಂದಿ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ ಸಂದರ್ಭ ಖಾನ್ ಅವರ ಎದೆಗೆ ಗುಂಡು ತಗುಲಿತ್ತು. ಕೂಡಲೇ ಅವರನ್ನು ಶ್ರೀನಗರದ ಶೇರೆ ಕಾಶ್ಮೀರ್ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ದಾಖಲಿಸಲಾಗಿತ್ತು.

ಖಾನ್ ಆರೋಗ್ಯಸ್ಥಿತಿ ಗಂಭೀರವಾಗಿದ್ದ ಪರಿಣಾಮ ರವಿವಾರ ಬೆಳಿಗ್ಗೆ ಅವರನ್ನು ಏರ್ ಆ್ಯಂಬ್ಯುಲೆನ್ಸ್ ಮೂಲಕ ಏಮ್ಸ್‌ಗೆ ಸಾಗಿಸಲಾಗಿತ್ತು. ಖಾನ್ ಅವರು ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)