ಉಡುಪಿ: ಎಸೆಸೆಲ್ಸಿ ಪೂರಕ ಪರೀಕ್ಷೆಗೆ ನಿಷೇಧಾಜ್ಞೆ
ಉಡುಪಿ, ಜೂ.19: ಜಿಲ್ಲೆಯಲ್ಲಿ 2019ನೇ ಸಾಲಿನ ಎಸೆಸೆಲ್ಸಿ ಪೂರಕ ಪರೀಕ್ಷೆಗಳು ಜೂ.21ರಿಂದ 28ರವರೆಗೆ ಜಿಲ್ಲೆಯ ಒಟ್ಟು 11 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ.
ಪರೀಕ್ಷೆಗಳು ಮುಕ್ತಾಯಗೊಳ್ಳುವವರೆಗೆ ಸಂಬಂಧಿಸಿದ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ, ಶಿಸ್ತು ಮತ್ತು ಶಾಂತಿಯನ್ನು ಕಾಪಾಡುವ ಸಲುವಾಗಿ ಹಾಗೂ ಪರೀಕ್ಷೆಗಳು ಯಾವುದೇ ಅಕ್ರಮ, ಅವ್ಯವಹಾರಗಳಿಲ್ಲದೇ ಸುಸೂತ್ರವಾಗಿ ನಡೆಯಲು ನಿಗದಿ ಪಡಿಸಿದ ಎಲ್ಲಾ 11 ಪರೀಕ್ಷೆ ಕೇಂದ್ರಗಳ ಸುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, 144(1)ರಂತೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಆದೇಶ ಹೊರಡಿಸಿದ್ದಾರೆ.
ಈ ನಿಷೇಧಾಜ್ಞೆ ಆದೇಶವು ನಿಗದಿಪಡಿಸಿದ ಪರೀಕ್ಷಾ ಕೇಂದ್ರಗಳ ಸುತ್ತಲೂ ಜೂ.21ರಿಂದ 28ರವರೆಗೆ ಬೆಳಗ್ಗೆ 8 ಗಂಟೆಯಿಂದ ಸಂಜೆ 6ಗಂಟೆಯವರೆಗೆ ಜಾರಿಯಲ್ಲಿರುತ್ತದೆ ಎಂದು ಪ್ರಕಟಣೆ ತಿಳಿಸಿದೆ.
Next Story