varthabharthi

ನಿಮ್ಮ ಅಂಕಣ

ಸರಕಾರಿ ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಿ

ವಾರ್ತಾ ಭಾರತಿ : 23 Jun, 2019
ಸದ್ದಾಂಹುಸೇನ ಬಿ. ಬಳಗಾನೂರ. ಗಣಿಹಾರ, ವಿಜಯಪುರ

ಮಾನ್ಯರೇ,
 ರಾಜ್ಯ ಸರಕಾರವು ರಾಜ್ಯದಲ್ಲಿರುವ ಖಾಸಗಿ ಆಸ್ಪತ್ರೆಗಳಲ್ಲಿ ದೊರೆಯುತ್ತಿರುವ ರೋಗಿಗಳ ಚಿಕಿತ್ಸಾ ಸೌಲಭ್ಯವನ್ನು ಸರಕಾರಿ ಆಸ್ಪತ್ರೆಗಳಲ್ಲಿಯೂ ದೊರಕುವಂತೆ ಮಾಡಬೇಕು. ಏಕೆಂದರೆ ಎಲ್ಲಾ ರೋಗಿಗಳೂ ಶ್ರೀಮಂತರಾಗಿರುವುದಿಲ್ಲ. ಅವರ ಬಳಿ ಚಿಕಿತ್ಸೆಗೆ ಹಣ ಇರುವುದಿಲ್ಲ. ಬಡ ರೋಗಿಗಳು ಅನಿವಾರ್ಯವಾಗಿ ಖಾಸಗಿ ಆಸ್ಪತ್ರೆಗಳಿಗೆ ಬಂದು ಚಿಕಿತ್ಸೆ ಪಡೆಯಬೇಕಾಗುತ್ತದೆ. ಚಿಕಿತ್ಸೆಯ ಹಣದ ಸಲುವಾಗಿ ಜನರು ಸಾಲ ಮಾಡಿಕೊಳ್ಳುತ್ತಾರೆ. ಸರಕಾರ ಎಚ್ಚೆತ್ತುಕೊಂಡು ಖಾಸಗಿ ಆಸ್ಪತ್ರೆಗಳಲ್ಲಿರುವಂತಹ ಪ್ರತಿಯೊಂದು ವ್ಯವಸ್ಥೆಯನ್ನು ಸರಕಾರಿ ಆಸ್ಪತ್ರೆಗಳಲ್ಲೂ ದೊರೆಯುವಂತೆ ಮಾಡಿದಾಗ ಬಡ ರೋಗಿಗಳಿಗೂ ಅನುಕೂಲವಾಗಲಿದೆ. ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲಿ ತಾಲೂಕಿಗೊಂದು ಹಾಗೂ ಹೋಬಳಿ ಮಟ್ಟಕ್ಕೊಂದು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯನ್ನು ನಿರ್ಮಿಸಬೇಕು. ಪ್ರತಿಯೊಂದು ಗ್ರಾಮ ಪಂಚಾಯತ್‌ಗಳಿಗೊಂದರಂತೆ ಆರೋಗ್ಯ ಸಹಾಯಕರನ್ನು ನೇಮಕ ಮಾಡಿ ಪ್ರಥಮ ಚಿಕಿತ್ಸೆಗೆ ಅನುಕೂಲ ಮಾಡಿಕೊಡಬೇಕು. ಇದರಿಂದ ಸಾಮಾನ್ಯ ಜನರಿಗೆ ಉಪಯೋಗವಾಗುತ್ತದೆ. ಸರಕಾರಗಳು ವೈದ್ಯರ ಮುಷ್ಕರ ಹಾಗೂ ಬಂದ್ ನಡೆಯದಂತೆ ನೋಡಿಕೊಳ್ಳಬೇಕು. ಈ ಬಗ್ಗೆ ಸಂಬಂಧ ಪಟ್ಟ ಸಚಿವರು, ಅಧಿಕಾರಿಗಳು ಆಸ್ಪತ್ರೆಯ ವೈದ್ಯರನ್ನು ಭೇಟಿಯಾಗಿ ರೋಗಿಗಳ ಹಾಗೂ ವೈದ್ಯರ ಸಮಸ್ಯೆಗಳನ್ನು ಆಲಿಸಬೇಕು. ಹೀಗಾದಾಗ ಮಾತ್ರ ಜನಸಾಮಾನ್ಯರಿಗೆ ಉತ್ತಮ ಚಿಕಿತ್ಸೆ ಸಿಗಲು ಸಾಧ್ಯ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)